1:23 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ: ಮಂಗಳೂರಿನಲ್ಲಿ ಭಾರೀ ಬಂದೋಬಸ್ತ್; ಬಾರ್, ಮದ್ಯದಂಗಡಿ ಬಂದ್

20/01/2024, 22:27

ಸಾಂದರ್ಭಿಕ ಚಿತ್ರ
ಮಂಗಳೂರು(reporterkarnataka.com): ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರಂದು ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ಕೆಳಕಂಡ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮಂಗಳೂರು ನಗರದಲ್ಲಿ ದೇವಸ್ಥಾನ ಮತ್ತು ಮಂದಿರಗಳಲ್ಲಿ ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ಗುರುತಿಸಲಾಗಿದೆ.
 131 ಸೂಕ್ಷ್ಮ ಪ್ರದೇಶಗಳಲ್ಲಿ ಹಗಲು ರಾತ್ರಿ ಪಿಕೆಟಿಂಗ್ ನೇಮಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
 ನಗರದಾದ್ಯಂತ 57 ಸೆಕ್ಟರ್ ಮೊಬೈಲ್ 24 ಗಂಟೆ ಹಗಲು ರಾತ್ರಿ ಗಸ್ತಿನಲ್ಲಿರುವ ವ್ಯವಸ್ಥೆಯನ್ನು ಮಾಡಲಾಗಿದೆ.
 14 ಸ್ಥಳಗಳಲ್ಲಿ ಚೆಕ್ ಪಾಯಿಂಟ್ ಗಳನ್ನು ನಿಯೋಜಿಸಲಾಗಿದೆ.
 9 ಸಿಎಆರ್ ಮತ್ತು 3 ಕೆಎಸ್ಆರ್ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
 ತಡರಾತ್ರಿ ಮತ್ತು ಮುಂಜಾನೆ ವಿಶೇಷ ಗಸ್ತುಗಳನ್ನು ಆಯೋಜಿಸಲಾಗಿದೆ.
 ಮಂಗಳೂರು ನಗರದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿಧ್ವಂಸಕ ತಪಾಸಣಾ ತಂಡದಿಂದ ತಪಾಸಣೆ ನಡೆಸಲಾಗುತ್ತಿದೆ.
 ರಾಜ್ಯದಲ್ಲಿ ಅಳವಡಿಸಲಾದ ಕ್ರಮದಂತೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ರ್ಯಾಲಿಗಳಿಗೆ ಅನುಮತಿ ನೀಡಿರುವುದಿಲ್ಲ.
 ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಆಯಾ ಎ.ಸಿ.ಪಿ ರವರ ಮಾರ್ಗದರ್ಶನದಲ್ಲಿ ಈಗಾಗಲೇ ಶಾಂತಿ ಸಭೆಗಳನ್ನು ಆಯೋಜಿಸಲಾಗಿರುತ್ತದೆ.
 ಪ್ರತೀ ಪೊಲೀಸ್ ಠಾಣಾ ಮಟ್ಟದಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವಲ್ಲಿ ಏರಿಯಾ ಡಾಮಿನೇಷನ್ ಮತ್ತು ರೂಟ್ ಮಾರ್ಚ್ ಕೈಗೊಳ್ಳಲಾಗಿದೆ.
 ಮಹಾನಗರ ಪಾಲಿಕೆಯೊಂದಿಗೆ ಸಮನ್ವಯ ಸಾದಿಸಿ ಫ್ಲೆಕ್ಸ್, ಬ್ಯಾನರ್ ಬಂಟಿಂಗ್ಸ್ ಅಳವಡಿಕೆಗಳ ಮೇಲೆ ಸೂಕ್ತ ನಿಗಾ ಇರಿಸಲಾಗಿದೆ ಮತ್ತು ಆಯೋಜಕರಿಗೆ ಅವುಗಳ ಭದ್ರತೆಯನ್ನು ಖಚಿತಪಡಿಸಲು ಸೂಚಿಸಲಾಗಿದೆ.
 ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ: 21-01-2024ರ ಮದ್ಯರಾತ್ರಿಯಿಂದ ದಿನಾಂಕ: 23-01-2024 ರ ಮುಂಜಾನೆಯ ವರೆಗೆ ನಗರದಲ್ಲಿರುವ ಎಲ್ಲಾ ರೀತಿಯ ಬಾರ್ ಮತ್ತು ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
 ಮಂಗಳೂರ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟಾರೆಯಾಗಿ 3-ಡಿಸಿಪಿ, ೦6-ಎಸಿಪಿ, 11-ಪಿ.ಐ ಮತ್ತು 37-ಪಿ.ಎಸ್.ಐ ದರ್ಜೆಯ ಅಧಿಕಾರಿಗಳನ್ನು ಹಾಗೂ 781 ಪೊಲೀಸ್ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು