4:04 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಸುಳ್ಯ: 23ರಂದು ಉಸ್ತುವಾರಿ ಸಚಿವರಿಂದ ಬೃಹತ್ ಜನತಾದರ್ಶನ

21/01/2024, 00:36

ಸುಳ್ಯ(reporterkarnataka.com): ಸುಳ್ಯದಲ್ಲಿ ಬೃಹತ್ ಜನತಾ ದರ್ಶನ ಕಾರ್ಯಕ್ರಮವನ್ನು ಇದೇ ತಿಂಗಳ 23ರಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಏರ್ಪಡಿಸಿದ್ದಾರೆ.
ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆ, ಅಹವಾಲುಗಳನ್ನು ಉಸ್ತುವಾರಿ ಸಚಿವರು ಸ್ವೀಕರಿಸಿ, ಪರಿಹಾರ ಒದಗಿಸಲು ವ್ಯವಸ್ಥೆ ಮಾಡಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‍ನಿಂದ ವ್ಯವಸ್ಥಿತವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರು ಈ ದಿಸೆಯಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಈ ಜನತಾದರ್ಶನ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಲಾಗುವುದು. ತಮ್ಮ ಅಹವಾಲುಗಳನ್ನು ಸಲ್ಲಿಸಲು ಆಗಮಿಸುವ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಲು ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಹೆಲ್ಪ್‍ಡೆಸ್ಕ್ ತೆರೆದು, ಸಮಸ್ಯೆಗಳನ್ನು ಇಲಾಖಾವಾರು ಹಂಚಲಾಗುವುದು. ಸಾರ್ವಜನಿಕರು ನೀಡಿದ ಅರ್ಜಿಯನ್ನು ಪಡೆಯಲು ವಿವಿಧ ಇಲಾಖೆಗಳಿಗಾಗಿ ಸ್ಥಳದಲ್ಲಿಯೇ ಕಳುಹಿಸಲಾಗುವುದು. ನಂತರ ಸಾರ್ವಜನಿಕರು ತಮ್ಮ ಸಮಸ್ಯೆ/ಅಹವಾಲುಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಲ್ಲಿಸಿ ಅವರಿಗೆ ಮೌಖಿಕವಾಗಿ ತಿಳಿಸಲು ವ್ಯವಸ್ಥೆ ಮಾಡಲಾಗುವುದು.
ಸಮಸ್ಯೆಗಳನ್ನು ನಿಗದಿತ ಸಮಯದೊಳಗೆ ಇತ್ಯರ್ಥ ಪಡಿಸಬೇಕಾಗುತ್ತದೆ. ಈ ಕುರಿತು ಸಾರ್ವಜನಿಕರಿಗೆ ನೀಡಿದ ಹಿಂಬರಹದ ಅನುಪಾಲನಾ ವರದಿಯನ್ನು ಸಲ್ಲಿಸಲಿದ್ದಾರೆ.
ಸಾರ್ವಜನಿಕರು ಈ ಜನತಾದರ್ಶನದ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು