12:48 AM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ರಾಮ ಭಕ್ತನೆಂದು ಹೇಳುಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರು ಜ.22ರಂದು ಶಾಲಾ ಕಾಲೆಜುಗಳಿಗೆ ರಜೆ ನೀಡಲಿ: ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ

21/01/2024, 18:37

ಮಂಗಳೂರು(reporterkarnataka.com): ತಾನು ರಾಮ ಭಕ್ತನೆಂದು ಹೇಳುಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.22ರಂದು ಶಾಲಾ ಕಾಲೆಜುಗಳಿಗೆ ರಜೆ ನೀಡುವ ಮೂಲಕ ಮಕ್ಕಳು ತಮ್ಮ ತಮ್ಮ ಮನೆಗಳಲ್ಲಿ ಕುಟುಂಬ ಸಮೇತ ಸಂಭ್ರಮ,ಪೂಜೆ ಆಚರಿಸಲು ಅವಕಾಶ ನೀಡಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಒತ್ತಾಯಿಸಿದ್ದಾರೆ.
ಶ್ರೀರಾಮನ ಆದರ್ಶ ಬೋಧಿಸುವ ಶಿಕ್ಷಣ ಇಲಾಖೆಯು ಶ್ರೀರಾಮ ಮಂದಿರ ಉದ್ಘಾಟನೆ, ಪ್ರಾಣ ಪ್ರತಿಷ್ಟೆ ಸಂದರ್ಭ ಮಕ್ಕಳು ಕುಟುಂಬ ಸಮೇತ ಪೂಜೆ, ಸಂಭ್ರಮವನ್ನು ಆಚರಿಸಲು ಸೋಮವಾರ ರಾಜ್ಯ ಶಿಕ್ಷಣ ಇಲಾಖೆ ರಜೆ ಸಾರಿಲ್ಲ. ಈ ಮೂಲಕ ಮೂಲಕ ಶಿಕ್ಷಣ ಇಲಾಖೆ ಶ್ರೀರಾಮನ ಆದರ್ಶ ಬೋಧಿಸುವ ನೈತಿಕತೆ ಕಳೆದುಕೊಳ್ಳುತ್ತಿದೆ.
ಮಾತ್ರವಲ್ಲ ಬಹುಸಂಖ್ಯಾತ ಜನರ ಮನಸ್ಸಿಗೆ ಘಾಸಿ ಉಂಟು ಮಾಡುತ್ತಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಅವರು ರಾಜ್ಯ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇಡೀ ದೇಶದಲ್ಲಿ ಹಬ್ಬದ ಸಂಭ್ರಮವಿದೆ. ಮನೆ ಮನೆಯಲ್ಲೂ ದೀಪಾವಳಿ ಅಚರಣೆಗೆ ತಯಾರಿ ನಡೆದಿದೆ. ಶಿಕ್ಷಣ ಇಲಾಖೆ ಮಾತ್ರ ಈ ಸಂಭ್ರಮದಲ್ಲಿ ಮಕ್ಕಳು ಭಾಗವಹಿಸದಂತೆ ರಜೆ ಸಾರದೆ ಪರೋಕ್ಷವಾಗಿ ತಡೆ ಒಡ್ಡಿದೆ.
ಕೆಲವು ಖಾಸಗೀ ಹಾಗೂ ಸರಕಾರಿ ಶಾಲೆಗಳಲ್ಲಿ ಉದ್ದೇಶ ಪೂರ್ವಕವಾಗಿ ಪರೀಕ್ಷೆ ನಡೆಸಲು ಮುಂದಾಗಿರುವುದು ಗಮನಕ್ಕೆ ಬಂದಿದೆ. ಇಂತಹ ಹಿಂದೂ ವಿರೋಧಿ ಭಾವನೆಯನ್ನು ಮಕ್ಕಳಲ್ಲಿ ಬೆಳೆಯಲು ಅವಕಾಶ ನೀಡದೆ ಹಿಂದೂಗಳ ಮನವಿಯನ್ನು ಪರಿಗಣಿಸಿ , ಸರಕಾರ ತತ್ ಕ್ಷಣ ರಜೆ ನೀಡಲು ಶಿಕ್ಷಣ ಇಲಾಖೆಗೆ ಆದೇಶಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
ಬಹುಸಂಖ್ಯಾತರ ಅದರ್ಶ ಪುರುಷ ಶ್ರೀರಾಮನ ಮಂದಿರವು 500 ವರ್ಷಗಳ ಸುಧೀರ್ಘ ಹೋರಾಟದ ಬಳಿಕ ಅಸ್ಥಿತ್ವಕ್ಕೆ ಬರುತ್ತಿದೆ. ನಮ್ಮ ಪೀಳಿಗೆಗೆ
ಇದನ್ನು ವೀಕ್ಷಿಸಲು ಸಿಕ್ಕಿರುವುದು ಪುಣ್ಯವೆಂದೇ ಭಾವಿಸಿದ್ದೇವೆ. ಈ ಭಾಗ್ಯದಿಂದ ಮಕ್ಕಳನ್ನು ವಂಚಿತರನ್ನಾಗಿ ಮಾಡಿ ಶಿಕ್ಷಣ ಇಲಾಖೆ ಯಾವ ಸಾಧನೆ ಮಾಡಲು ಹೊರಟಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು