7:00 AM Sunday12 - July 2026
ಬ್ರೇಕಿಂಗ್ ನ್ಯೂಸ್
ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ…

ಇತ್ತೀಚಿನ ಸುದ್ದಿ

ಅಯೋಧ್ಯೆ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ: ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್; 9 ಸಿಎಆರ್ ಮತ್ತು 3 ಕೆಎಸ್ ಆರ್ ಪಿ ತುಕಡಿಗಳ ನಿಯೋಜನೆ

21/01/2024, 21:20

ಮಂಗಳೂರು(reporterkarnataka.com): ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ನಾಳೆ (ಜ. 22) ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮಂಗಳೂರು ನಗರದಲ್ಲಿ ದೇವಸ್ಥಾನ ಮತ್ತು ಮಂದಿರಗಳಲ್ಲಿ ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ಗುರುತಿಸಲಾಗಿದೆ. 131 ಸೂಕ್ಷ್ಮ ಪ್ರದೇಶಗಳಲ್ಲಿ ಹಗಲು ರಾತ್ರಿ ಪಿಕೆಟಿಂಗ್ ನೇಮಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನಗರದಾದ್ಯಂತ 57 ಸೆಕ್ಟರ್ ಮೊಬೈಲ್ 24 ಗಂಟೆ ಹಗಲು ರಾತ್ರಿ ಗಸ್ತಿನಲ್ಲಿರುವ ವ್ಯವಸ್ಥೆಯನ್ನು ಮಾಡಲಾಗಿದೆ. 14 ಸ್ಥಳಗಳಲ್ಲಿ ಚೆಕ್ ಪಾಯಿಂಟ್ ಗಳನ್ನು ನಿಯೋಜಿಸಲಾಗಿದೆ. 9 ಸಿಎಆರ್ ಮತ್ತು 3 ಕೆಎಸ್ ಆರ್ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ತಡರಾತ್ರಿ ಮತ್ತು ಮುಂಜಾನೆ ವಿಶೇಷ ಗಸ್ತುಗಳನ್ನು ಆಯೋಜಿಸಲಾಗಿದೆ. ಮಂಗಳೂರು ನಗರದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿಧ್ವಂಸಕ ತಪಾಸಣಾ ತಂಡದಿಂದ ತಪಾಸಣೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಅಳವಡಿಸಲಾದ ಕ್ರಮದಂತೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ರ್ಯಾಲಿಗಳಿಗೆ ಅನುಮತಿ ನಿರಾಕರಿಸಲಾಗಿದೆ. ಪ್ರತೀ ಪೊಲೀಸ್ ಠಾಣಾ ಮಟ್ಟದಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವಲ್ಲಿ ಏರಿಯಾ ಡಾಮಿನೇಷನ್ ಮತ್ತು ರೂಟ್ ಮಾರ್ಚ್ ಕೈಗೊಳ್ಳಲಾಗಿದೆ. ಮಹಾನಗರ ಪಾಲಿಕೆಯೊಂದಿಗೆ ಸಮನ್ವಯ ಸಾಧಿಸಿ ಫ್ಲೆಕ್ಸ್, ಬ್ಯಾನರ್ ಬಂಟಿಂಗ್ಸ್ ಅಳವಡಿಕೆಗಳ ಮೇಲೆ ಸೂಕ್ತ ನಿಗಾ ಇರಿಸಲಾಗಿದೆ ಮತ್ತು ಆಯೋಜಕರಿಗೆ ಅವುಗಳ ಭದ್ರತೆಯನ್ನು ಖಚಿತಪಡಿಸಲು ಸೂಚಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ: 21-01-2024ರ ಮದ್ಯರಾತ್ರಿಯಿಂದ ದಿನಾಂಕ: 23-01-2024 ರ ಮುಂಜಾನೆಯ ವರೆಗೆ ನಗರದಲ್ಲಿರುವ ಎಲ್ಲಾ ರೀತಿಯ ಬಾರ್ ಮತ್ತು ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಗಳೂರ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟಾರೆಯಾಗಿ 3-ಡಿಸಿಪಿ, ೦6-ಎಸಿಪಿ, 11-ಪಿ.ಐ ಮತ್ತು 37-ಪಿ.ಎಸ್.ಐ ದರ್ಜೆಯ ಅಧಿಕಾರಿಗಳನ್ನು ಹಾಗೂ 781 ಪೊಲೀಸ್ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು