ಇತ್ತೀಚಿನ ಸುದ್ದಿ
ಅಯೋಧ್ಯೆ ನೂತನ ಭವ್ಯ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ: ಪ್ರಧಾನಿ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಉಪಸ್ಥಿತಿ
22/01/2024, 13:03

ಅಯೋಧ್ಯೆ(reporterkarnataka.com): ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಿದ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ಲಲ್ಲಾನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವ ಮೂಲಕ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಮಂದಿರವನ್ನು ಉದ್ಘಾಟಿಸಲಾಯಿತು.
ಮಧ್ಯಾಹ್ನ 12:29:03 ರಿಂದ 12.30:35 ರವರೆಗೆ ರಾಮಲಲ್ಲಾನ ವಿಗ್ರಹದ ಪ್ರಾಣ ಪ್ರತಿಷ್ಠಾನೆಯ ವಿಧಿವಿಧಾನವನ್ನು ಪ್ರಧಾನ ಅರ್ಚಕರು ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಸೂರ್ಯೋದಯ ಮತ್ತು ಸೂರ್ಯಾಸ್ತದ ನಡುವೆ ಪ್ರತಿದಿನ ಒಮ್ಮೆ ನಡೆಯುವ 48 ನಿಮಿಷಗಳ ‘ಅಭಿಜೀತ್ ಮುಹೂರ್ತ’ದಲ್ಲಿ ಈ 84 ಸೆಕೆಂಡುಗಳು ಅತ್ಯಂತ ಪವಿತ್ರವೆಂದು ನಂಬಲಾಗಿದೆ.
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಉಪಸ್ಥಿತರಿದ್ದರು.