10:42 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಶ್ರೀ ವಿಠೋಭ ರುಕುಮಾಯಿ ದೇವಸ್ಥಾನ: ಎಲ್ ಇಡಿಯಲ್ಲಿ ರಾಮ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರ, ಭಜನೆ, ಅನ್ನಸಂತರ್ಪಣೆ

22/01/2024, 19:43

ಮಂಗಳೂರು(reporterkarnataka.com): ನಗರದ ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಆವರಣದಲ್ಲಿ ಎಲ್ ಇಡಿ ಪರದೆಯಲ್ಲಿ ಅಯೋಧ್ಯೆಯ ರಾಮಪ್ರಾಣ ಪ್ರತಿಷ್ಠೆಯ ನೇರಪ್ರಸಾರವನ್ನು ಭಕ್ತರು ನೋಡುವ ವ್ಯವಸ್ಥೆ ಮಾಡಲಾಗಿತ್ತು.

ನೂರಾರು ಸಂಖ್ಯೆಯಲ್ಲಿ ದೇವಸ್ಥಾನದ ಆವರಣದಲ್ಲಿ ರಾಮಭಕ್ತರು ಉಪಸ್ಥಿತರಿದ್ದು, ನೇರಪ್ರಸಾರವನ್ನು ವೀಕ್ಷಿಸಿದರು.
ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಮಾತ್ರವಲ್ಲ ರಸ್ತೆಯಲ್ಲಿ ಸಂಚರಿಸುವ ನಾಗರಿಕರಿಗೆ, ವಾಹನಗಳಲ್ಲಿ‌ ಪ್ರಯಾಣಿಸುವ ಜನರಿಗೂ ಶ್ರೇಯಾ ಸ್ವೀಟ್ಸ್ ವತಿಯಿಂದ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ದೇವಸ್ಥಾನದಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ಭಜನೆ ಆರಂಭವಾಗಿತ್ತು. ಅಬಾಲವೃದ್ಧರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜೈ ಶ್ರೀರಾಮ್ ಘೋಷಣೆಗಳನ್ನು ಹಾಕಿದರು. ಮಧ್ಯಾಹ್ನ ಪೂಜೆಯ ಬಳಿಕ ಭಕ್ತರಿಗೆ ಭೋಜನ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ದೇವಳದ ಆಡಳಿತ ಮೋಕ್ತೇಸರರು, ಟ್ರಸ್ಟಿಗಳು, ಭಕ್ತರು, ಗಣ್ಯರು ಉಪಸ್ಥಿತರಿದ್ದರು. ರಾತ್ರಿ ಪೂಜೆಯ ನಂತರ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು