ಇತ್ತೀಚಿನ ಸುದ್ದಿ
ನಂಜನಗೂಡು ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ
23/01/2024, 19:13
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ನಂಜನಗೂಡು ತಾಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಪ್ರಪ್ರಥಮವಾಗಿ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು
ಪಟ್ಟಣದ ಶ್ರೀ ನೀಲಕಂಠೇಶ್ವರ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮ ಒಕ್ಕೂಟದ ಅಧ್ಯಕ್ಷ ಎಸ್ ನಟರಾಜ್ ಕಾರ್ಯದರ್ಶಿ ಕುಮಾರ್ ಪುರಸಭಾ ಮಾಜಿ ಅಧ್ಯಕ್ಷ ಆರ್ ವಿ ಮಾದೇವಸ್ವಾಮಿ ಶಿಕ್ಷಣ ಸಂಯೋಜಕರಾದ ರಮೇಶ್ ಸೇರಿದಂತೆ ಮತ್ತಿತರೆ ಗಣ್ಯರು ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಬಳಿಕ ಒಕ್ಕೂಟದ ಅಧ್ಯಕ್ಷ ನಟರಾಜ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.


ಕಾರ್ಯಕ್ರಮದಲ್ಲಿ ನೀಲಕಂಠೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕುಮಾರ್, ಒಕ್ಕೂಟದ ಪದಾಧಿಕಾರಿಗಳಾದ ಹೆಚ್‌ಬಿ ಮರಿಯಪ್ಪ, ಚೆಲುವಪ್ಪ, ಶಶಿಧರ್, ರಂಗನಾಥ್, ಮಂಜುನಾಥ್, ರೇವತಿ, ಮಹದೇವಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು














