1:53 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ವಿಧಾಸೌಧ ಮುಂಭಾಗದಲ್ಲಿ ನೆಹರೂ ಪ್ರತಿಮೆ ಮರುಸ್ಥಾಪನೆ: ಪ್ರಥಮ ಪ್ರಧಾನಿಯ ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ

08/08/2021, 17:42

 

ಬೆಂಗಳೂರು (reporterkarnataka.com): 

ದೇಶದ ಪ್ರಥಮ ಪ್ರಧಾನಿ ಜವಾಹರ್‌ಲಾಲ್‌ ನೆಹರೂ ಅವರು ದೇಶದ ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಅಭಿವೃದ್ದಿಗೊಳಿಸಿ ನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು. ಅವರು ಹಾಕಿಕೊಟ್ಟ ಆದರ್ಶವನ್ನು ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರೂ ಅವರ ಪ್ರತಿಮೆಯನ್ನು ಭಾನುವಾರ ಅನಾವರಣಗೊಳಿಸಿದ ಬಳಿಕ ಅವರು ಮಾಧ್ಯಮದ ಜತೆ ಮಾತನಾಡಿದರು.

ನೆಹರೂ ಅವರು ಸ್ವತಂತ್ರ ಭಾರತದ ಪ್ರಥಮ ಪ್ರಧಾನಿಯಾಗಿ ನವ ಭಾರತ ನಿರ್ಮಾಣದ ಕಲ್ಪನೆಯನ್ನು ಸಾಕಾರಗೊಳಿಸಲು ಮಹತ್ವದ ಪಾತ್ರ ವಹಿಸಿದ್ದಾರೆ. ದೇಶದ ಆಡಳಿತ ಚುಕ್ಕಾಣಿಯನ್ನು ಆಂಗ್ಲರ ಕೈಯಿಂದ ತೆಗೆದುಕೊಂಡು ಭಾರತದ
ಆಡಳಿತ ನಡೆಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಮಹಾತ್ಮ ಗಾಂಧೀಜಿ ಜತೆ ನೆಹರೂ ನಿಕಟ ಸಂಪರ್ಕ ಹೊಂದಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಜೈಲು ವಾಸ ಅನುಭವಿಸಿದ ನೆಹರೂ ಅವರ ಆದರ್ಶಗಳ ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಮೆಟ್ರೋ ಕಾಮಗಾರಿಗಾಗಿ ಸ್ಥಳಾಂತರಗೊಂಡಿದ್ದ ನೆಹರೂ ಅವರ ಪ್ರತಿಭೆಯನ್ನು ವಿಧಾನಸೌಧದ ಮುಂದೆ ಮರುಸ್ಥಾಪಿಸುವ ಮುಖೇನ ವಿಧಾನಸೌಧದ ಮೆರುಗು ಹೆಚ್ಚಿಸಿದಂತಾಗುತ್ತದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು