8:58 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಬೈಕಿಗೆ ನೇತು ಹಾಕಿದ್ದ ಬ್ಯಾಗಿನಲ್ಲಿ ಹುಲಿ ತಲೆಬುರುಡೆ, ಹಲ್ಲು, ಉಗುರು ಪತ್ತೆ: ಇಬ್ಬರ ಬಂಧನ

24/01/2024, 20:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಬೈಕಿಗೆ ನೇತುಹಾಕಿದ್ದ ಬ್ಯಾಗಿನಲ್ಲಿ ಹುಲಿ ತಲೆಬುರುಡೆ, ಹಲ್ಲು, ಉಗುರು ಪತ್ತೆಯಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿರುವ ಘಟನೆ ವರದಿಯಾಗಿದೆ.
ಮೂಡಿಗೆರೆ ತಾಲ್ಲೂಕು ಬಣಕಲ್ ಹೋಬಳಿ ಕುಂಡ್ರ ಗ್ರಾಮದ ಸತೀಶ್ ಮತ್ತು ಸುಧೀರ್ ಬಂಧಿತರು. ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿ ಜನವರಿ 19 ರಂದು ಶುಕ್ರವಾರ ಇಬ್ಬರನ್ನು ಬಂಧಿಸಲಾಗಿದೆ.
ಪ್ರಕರಣವೊಂದರಲ್ಲಿ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದ ಸತೀಶ್ ನನ್ನು ಖಚಿತ ಮಾಹಿತಿ ಮೇರೆಗೆ ಮೂಡಿಗೆರೆ ಅರಣ್ಯ ಸಿಬ್ಬಂದಿ ತಡೆದು ಬೈಕ್ ಗೆ ನೇತುಹಾಕಿದ್ದ ಬ್ಯಾಗ್ ಪರೀಶೀಲನೆ ನಡೆಸಿದಾಗ ಅದರಲ್ಲಿ ಹುಲಿ ತಲೆಬುರುಡೆ, ಮೂರು ಹುಲಿ ಹಲ್ಲು, ಮೂರು ಹುಲಿ ಉಗುರು, ಒಂದು ಮೂಳೆ ಇರುವುದು ಪತ್ತೆಯಾಗಿದೆ.

ತಕ್ಷಣ ಸತೀಶ್ ಮತ್ತು ಆತನ ಜೊತೆಗಿದ್ದ ಸುಧೀರ್ ಇವರುಗಳನ್ನು ಅರಣ್ಯ ಸಿಬ್ಬಂದಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಪತ್ರಿಕೆಗೆ ಮಾಹಿತಿ ನೀಡಿರುವ ಚಿಕ್ಕಮಗಳೂರು ಡಿ.ಎಫ್.ಓ. ರಮೇಶ್ ಬಾಬು ಅವರು ಬಂಧಿತರ ವಿರುದ್ಧ ವನ್ಯಜೀವಿ ಕಾಯ್ದೆ 1972ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ಬಂಧಿತರಿಂದ ಒಂದು ಹುಲಿ ತಲೆಬುರುಡೆ, ಮೂರು ಹಲ್ಲು, ಮೂರು ಉಗುರು, ಒಂದು ಮೂಳೆ, ನಾಲ್ಕು ಮೊಬೈಲ್, ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರವಾಗಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ಹಿಂದೆ ಯಾರೇ ಇದ್ದರು ಅವರ ವಿರುದ್ಧ ಕಾನೂನು  ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಡಿ.ಎಫ್.ಓ. ರಮೇಶ್ ಬಾಬು, ಮೂಡಿಗೆರೆ ಎ.ಸಿ.ಎಫ್. ರಘು, ಮೂಡಿಗೆರೆ ಆರ್. ಎಫ್.ಓ. ಚರಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಅರಣ್ಯ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಸತೀಶ್ ಈಗ್ಗೆ ಕೆಲ ದಿನಗಳ ಹಿಂದೆ ಹುಲಿ ಉಗುರು ಧರಿಸಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ. ಇದೀಗ ಹುಲಿ ತಲೆಬುರುಡೆಯನ್ನೇ ಇಟ್ಟುಕೊಂಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. *ಪಾರದರ್ಶಕ ತನಿಖೆಗೆ ಆಗ್ರಹ:* ಈ ಪ್ರಕರಣದಲ್ಲಿ ಸ್ಥಳೀಯರು ಹಲವಾರು ಅನುಮಾನಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಭಾಗದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಇರುವ ಬಗ್ಗೆಯೂ ಶಂಕೆ ವ್ಯಕ್ತಪಡಿಸುತ್ತಿದ್ದಾರೆ.
ಒಟ್ಟಾರೆಯಾಗಿ  ಹುಲಿಯ ಅಂಗಾಂಗಗಳು ಪತ್ತೆಯಾಗಿರುವ ಪ್ರಕರಣದ ಬಗ್ಗೆ ಅಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕು, ಈ ಜಾಲದ ಮೂಲವನ್ನು ಭೇದಿಸಿ ನಿಜವಾದ ತಪ್ಪಿತಸ್ತರಿಗೆ ಶಿಕ್ಷೆಯಾಗುವಂತೆ ಕ್ರಮ ಜರುಗಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು