4:43 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕಮಲಾಪುರ: ಜನತಾ ದರ್ಶನ, ಜನರ ಅಹವಾಲು ಆಲಿಸಿದ ಸಚಿವ ಜಮೀರ್ ಅಹಮದ್ ಖಾನ್

25/01/2024, 20:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಮಯೂರ ಭುವನೇಶ್ವರಿ ಹೋಟೆಲ್ ಬಳಿ, ಜನತಾ ದರ್ಶನ ಕಾರ್ಯಕ್ರಮ ಜರುಗಿತು.

ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು, ಜನತಾ ದರ್ಶನಕ್ಕೆ ತಾವು ತಡವಾಗಿ ಆಗಮಿಸಿದ್ದಕ್ಕಾಗಿ. ಜನತೆಯಲ್ಲಿ ಕ್ಷಮೆಯಾಚಿಸಿದ ರೀತಿಯಲ್ಲಿ, ಅವರು ವೇದಿಕೆಗೆ ಆಗಮಿಸುತ್ತಾ ಸಾರ್ವಜನಿಕರ ಕಡೆ ಎರಡು ಕೈ ಎತ್ತಿ ಮುಗಿದು ನಮಸ್ಕರಿಸಿದರು. ಜನತಾದರ್ಶನದಲ್ಲಿ ನೂರಾರು ಜನರು ತಮ್ಮ ಅಹವಾಲುಗಳನ್ನು ಸಚಿವರಿಗೆ ನೀಡಿದರು, ವಿಕಲ ಚೇತನರು, ಮಹಿಳೆಯರು ವೃದ್ಧರು ತಮ್ಮ ಕುಂದು ಕೊರತೆಗಳನ್ನು ಹೇಳಿಕೊಂಡರು, ಅರ್ಜಿಗಳನ್ನು ನೀಡಿದರು. ಸಚಿವರು ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸುವ ಪ್ರಯತ್ನ ಮಾಡಿದರು. ಹಲವು ಸಮಸ್ಯೆಗಳಿಗೆ ವೇದಿಕೆಯಲ್ಲಿ ಹಾಜರಿದ್ದ ಇಲಾಖೆಗಳ ಅಧಿಕಾರಿಗಳ ಗಮನಕ್ಕೆ ತಂದರು. ಶಾಸಕರಾದ ಹೆಚ್.ಆರ್.ಗವಿಯಪ್ಪ ಸೇರಿದಂತೆ ವಿವಿಧ ಜನ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು. ಕಮಲಾಪುರ ಹಾಗೂ ವಿವಿದೆಡೆಗಳಿಂದ ಆಗಮಿಸಿದ್ದ, ಸಾರ್ವಜನಿಕರು ಜನತಾ ದರ್ಶನದಲ್ಲಿ ಭಾಗಿಯಾಗಿದ್ದರು.
11 ಗಂಟೆಗೆ ಆರಂಭವಾಗಬೇಕಿದ್ದ ಜನತಾ ದರ್ಶನ ಕಾರ್ಯಕ್ರಮ ತುಂಬಾ ತಡವಾಗಿ ಆರಂಭವಾಗಿದ್ದಕ್ಕೆ, ಅಹವಾಲುಗಳನ್ನು ಹೊತ್ತು ತಂದ ಜನರು ತೀವ್ರ ಬೇಸರ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು