9:58 PM Sunday24 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ಟೀ ಮಾರುವ ವ್ಯಕ್ತಿ ದೇಶದ ಪ್ರಧಾನಿ ಆಗಲು ಇದೇ ಸಂವಿಧಾನ ಕಾರಣ: ನಂಜನಗೂಡು ಗಣರಾಜ್ಯೋತ್ಸವದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್

26/01/2024, 19:07

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ರಚಿಸಿದ ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವವನ್ನಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.


ನಂಜನಗೂಡು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು, ಇಂದು ಅಂಬೇಡ್ಕರ್ ಅವರನ್ನು ಸ್ಮರಿಸುವ ಮತ್ತು ಗೌರವ ಸಲ್ಲಿಸುವ ದಿನವಾಗಿದೆ. ಭಾರತ ದೇಶದಲ್ಲಿ ಹಲವಾರು ಧರ್ಮ, ಜಾತಿ ವ್ಯವಸ್ಥೆ, ವಿವಿಧ ಧಾರ್ಮಿಕ ಆಚರಣೆ, ಭಾಷೆ, ಜನರನ್ನು ಒಗ್ಗೂಡಿಸಿ ಮುನ್ನಡೆಸುವ ಗ್ರಂಥ ನಮ್ಮ ಸಂವಿಧಾನವಾಗಿದೆ.
ಸಂವಿಧಾನದ ಮೂಲಕ ನಮ್ಮ ಹಕ್ಕುಗಳನ್ನು ತಿಳಿದುಕೊಳ್ಳಲು ಮುಂದಾಗಬೇಕು ಹಾಗೂ ನಮ್ಮ ಮೂಲ ಕರ್ತವ್ಯಗಳನ್ನು ಅರಿತುಕೊಳ್ಳಬೇಕು. ಈ ಸಂವಿಧಾನದಿಂದ ನನ್ನನ್ನು ಕಿರಿಯ ಶಾಸಕನನ್ನಾಗಿ ಮಾಡಿದೆ. ಅದೇ ರೀತಿ ಟೀ ಮಾರುವ ವ್ಯಕ್ತಿ ದೇಶದ ಪ್ರಧಾನಿ ಆಗಲು ಇದೇ ಸಂವಿಧಾನ ಕಾರಣವಾಗಿದೆ.
ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಮತ್ತು ಸಂವಿಧಾನದ ಮೂಲ ತತ್ವಗಳನ್ನು ತಿಳಿಸಬೇಕು ಎಂದು ಕರೆ ನೀಡಿದರು.
ಇದಕ್ಕೂ ಮುನ್ನ ತಹಸಿಲ್ದಾರ್ ಶಿವಕುಮಾರ್ ಕಾಸನೂರ್ ಅವರು ಧ್ವಜಾರೋಹಣ ನೆರವೇರಿಸಿ ಶುಭ ಸಂದೇಶ ತಿಳಿಸಿದರು.
ಪೊಲೀಸರು ಮತ್ತು ವಿವಿಧ ಶಾಲಾ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನೆ ನಡೆಸಿ ಅತಿಥಿ ಗಣ್ಯರಿಗೆ ಗೌರವ ವಂದನೆ ಸಲ್ಲಿಸಿದರು.
ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಡಿವೈಎಸ್ಪಿ
ಗೋವಿಂದರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಟಿ. ಶಿವಲಿಂಗಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ನಗರಸಭಾ ಆಯುಕ್ತ ನಂಜುಂಡಸ್ವಾಮಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು