12:30 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಚಿತ್ರದುರ್ಗ ಬಳಿ ಭೀಕರ ರಸ್ತೆ ಅಪಘಾತ: ಹಸುಳೆ ಸಹಿತ ದೇವದುರ್ಗದ ಒಂದೇ ಕುಟುಂಬದ 4 ಮಂದಿ ಸಾವು

26/01/2024, 19:21

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗೇಟ್ ರಾಷ್ಟೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಕ್ಕಳು ಸೇರಿದಂತೆ 4 ಮಂದಿ ಸಾವನ್ನಪ್ಪಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರಂತ ಸಂಭವಿಸಿದೆ. ಅಪಘಾತದಲ್ಲಿ 3 ಮಕ್ಕಳು ಸೇರಿ ನಾಲ್ವರು ಅಸುನೀಗಿದ್ದಾರೆ. ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗೇಟ್ ರಾಷ್ಟೀಯ ಹೆದ್ದಾರಿ 150 ಎ ಪ್ರದೇಶದಲ್ಲಿ ಈ ಅಪಘಾತ ನಡೆದಿದೆ. ಮೃತರನ್ನು ಲಿಂಗಪ್ಪ (26), ಸಿಂಧು ಶ್ರೀ(2) ಅಯ್ಯಳಪ್ಪ (5 ತಿಂಗಳು) ತಿಂಗಳು, ರಕ್ಷಾ(3 ತಿಂಗಳು) ಮೃತ ದುರ್ದೈವಿಗಳು.
ಕಾರಿನಲ್ಲಿದ್ದ ಇನ್ನೂ ಮೂವರಿಗೆ ತೀವ್ರ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಯಲ್ಲಮ್ಮ (30), ಮಲ್ಲಮ್ಮ (20) ಹಾಗೂ ನಾಗಪ್ಪ (35) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ. ಮೃತರೆಲ್ಲ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ.
ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಈ ಅಪಘಾತವಾಗಿದ್ದು, ನಸುಕಿನ ವೇಳೆ ಚಾಲಕನು ನಿದ್ರೆ ಮಂಪರಿನಲ್ಲಿ ಜಾರಿದ ಕಾರಣ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದಿದೆ.
ಸ್ಥಳಕ್ಕೆ ಪಿಎಸ್ಐ ಶಿವರಾಜ್ ಭೇಟಿ ಪರಿಶೀಲನೆ ನಡೆಸಿದ್ದು ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು