11:05 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: 6ನೇ ತಂಡದ ಉದ್ಘಾಟನೆ

27/01/2024, 23:15

ಮಂಗಳೂರು(reporterKarnataka.com): ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ, ಭಾರತೀಯ ಕೃಷಿ ಅನುಸಂಧಾನ ಪರಿಷತ್-ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು, ಸಮೇತಿ (ದಕ್ಷಿಣ), ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು, ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆ, (ಮ್ಯಾನೇಜ್), ಹೈದರಾಬಾದ್ ಮತ್ತು ಕೃಷಿ ಇಲಾಖೆ, ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ 6ನೇ ತಂಡದ ಉದ್ಘಾಟನಾ ಸಮಾರಂಭ ನಡೆಯಿತು.


ದಕ್ಷಿಣ ಕನ್ನಡ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಡಾ. ಕೆಂಪೇಗೌಡ ಎಚ್. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪರಿಕರ ಮಾರಾಟಗಾರರು ವ್ಯಾಪಾರದ ಜೊತೆಗೆ ನೈತಿಕತೆಯನ್ನು ಹೊಂದಿರಬೇಕು. ಪ್ರಮಾಣ ಪತ್ರಕ್ಕಾಗಿ ಮಾತ್ರವಲ್ಲದೆ ಜ್ಞಾನದ ಅವಶ್ಯಕತೆಕಾಗಿ ದೇಸಿ ಕೋರ್ಸ್ ಅವಶ್ಯವಾಗಿದೆ ಎಂದು ಹೇಳಿದರು.
ದೇಸಿ ತರಬೇತಿಯ ರಾಜ್ಯ ನೋಡಲ್ ಅಧಿಕಾರಿಯಾದ ಡಾ. ಬಿ. ಕಲ್ಪನಾ ಅವರು ಪ್ರಾಸ್ತಾವಿಕ ನುಡಿಯನ್ನಾಡಿ ಪರಿಕರ ಮಾರಾಟಗಾರರಿಗೆ ದೇಸಿ ತರಬೇತಿಯ ಅಗತ್ಯತೆಯ ಬಗ್ಗೆ, ದೇಸಿ ತರಬೇತಿಯ ಅನುಷ್ಠಾನದ ಬಗ್ಗೆ, ದೇಸಿ ತರಬೇತಿಯ ಮೂಲ ಉದ್ಧೇಶದ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ದೇಶದಲ್ಲಿ ಈಗಾಗಲೇ 2,80,000 ಜನ ದೇಸಿ ಕೋರ್ಸ್ ಗೆ ನೊಂದವಣಿ ಮಾಡಿದ್ದು 80,200 ಅಭ್ಯರ್ಥಿ ಗಳು ಪ್ರಮಾಣ ಪತ್ರವನ್ನು ಪಡೆದಿರುತ್ತಾರೆ. 22,000 ಅಭ್ಯರ್ಥಿ ಗಳು ಪ್ರಸ್ತುತ ತರಬೇತಿಯನ್ನು ಪಡೆಯುತ್ತಿದ್ದಾರೆ ಎಂದು ಹೇಳಿದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೀನುಗಾರಿಕಾ ಕಾಲೇಜಿನ ಡೀನ್ ಆದ ಡಾ. ಆಂಜನೇಯಪ್ಪ ಎಚ್. ಎನ್. ಅವರು ಮಾತನಾಡಿ ಪರಿಕರ ಮಾರಾಟಗಾರರು ತಮ್ಮನ್ನು ತಾವೇ ಸಂಪನ್ಮೂಲ ವ್ಯಕ್ತಿಯಾಗಿ ಮೊದಲು ಪರಿವರ್ತಿಸಿಕೊಳ್ಳಬೇಕು. ಇತರ ಪರಿಕರ ಮಾರಾಟಗಾರರೊಂದಿಗೆ ಸಂವಾದ ನಡೆಸಿ ಮಾಹಿತಿಯನ್ನು ಹಂಚಿಕೊಂಡು ರೈತರಿಗೆ ಸೂಕ್ತ ಸಲಹೆಯನ್ನು ನೀಡಬೇಕು ಎಂದು ಹೇಳಿದರು.
ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಡಾ. ಟಿ.ಜೆ.ರಮೇಶ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಯಾದ ಡಾ.ರವೀಂದ್ರ ಗೌಡ ಪಾಟೀಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕೇಂದ್ರದ ವಿಜ್ಞಾನಿ ಮತ್ತು ದೇಸಿ ಸಂಯೋಜಕರಾದ ಡಾ. ಶಿವಕುಮಾರ್ ಆರ್ ಸ್ವಾಗತಿಸಿದರು, ಡಾ. ಮಲ್ಲಿಕಾರ್ಜುನ ಎಲ್., ವಿಜ್ಞಾನಿ (ಮಣ್ಣು ವಿಜ್ಞಾನ) ಇವರು ವಂದಿಸಿದರು, ದೇಸಿ ಕಾರ್ಯಕ್ರಮದ ಅನುವುಗಾರರಾದ ವಿಜಿತ ವಿ. ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಒಟ್ಟು 40 ಅಭ್ಯರ್ಥಿ ಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು