7:04 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ

ಇತ್ತೀಚಿನ ಸುದ್ದಿ

ಯುವಜನರ ಉದ್ಯೋಗ, ಘನತೆಯ ಬದುಕಿಗಾಗಿ ನಡೆಯಲಿದೆ ಡಿವೈಎಫ್ಐ ರಾಜ್ಯ ಸಮ್ಮೇಳನ: ಮುನೀರ್ ಕಾಟಿಪಳ್ಳ

27/01/2024, 23:09

ಮಂಗಳೂರು(reporterkarnataka.com): ದೇಶದಲ್ಲಿಂದು ಯಾವತ್ತೂ ಕಂಡು ಕೇಳರಿಯದಷ್ಟು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಈ ಬಗ್ಗೆ ಚರ್ಚಿಸಬೇಕಾಗಿದ್ದ ಯುವಜನತೆ ಬಿಜೆಪಿಯು ರಾಮ ಮಂದಿರದ ನಿರ್ಮಾಣದ ಹೆಸರಲ್ಲಿ ನಡೆಸುವ ಧರ್ಮ ರಾಜಕಾರಣದ ಚುನಾವಣೆ ಸಿದ್ದತೆಗೆ ಬಲಿಯಾಗುತ್ತಿದ್ದಾರೆ. ಕೇಂದ್ರ ಸರಕಾರದ ಯುವಜನ ವಿರೋಧಿ ನೀತಿಗಳ ವಿರುದ್ಧ ಡಿವೈಎಫ್ಐ ದೇಶವ್ಯಾಪಿಯಲ್ಲಿ ನಿರುದ್ಯೋಗದ ವಿರುದ್ಧ ಹೋರಾಟ ಸಂಘಟಿಸುತ್ತಿದ್ದು ಕರ್ನಾಟಕ ರಾಜ್ಯದಲ್ಲೂ ಯುವಜನರ ಉದ್ಯೋಗ, ಘನತೆಯ ಬದುಕಿಗಾಗಿ 12 ನೇ ಕರ್ನಾಟಕ ರಾಜ್ಯ ಸಮ್ಮೇಳನವು ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ ಹೇಳಿದರು.


ಡಿವೈಎಫ್ಐ ಬಜಾಲ್ ಪಕ್ಕಲಡ್ಕ ಘಟಕ ಆಯೋಜಿಸಿದ ರಾಜ್ಯ ಸಮ್ಮೇಳನದ ಸಿದ್ದತಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸರ್ವರಿಗೂ ಶಿಕ್ಷಣ, ಉದ್ಯೋಗದ ಹಕ್ಕಿಗಾಗಿ ರಾಜ್ಯಾದ್ಯಂತ ಸುದೀರ್ಘವಾದ ಚಳುವಳಿಯನ್ನು ಕಟ್ಟಿದ ಡಿವೈಎಫ್ಐ ದ.ಕ. ಜಿಲ್ಲೆಯಲ್ಲಿ ಕೋಮುವಾದಿಗಳ ಅಟ್ಟಹಾಸದ ನಡುವೆಯೂ ಜನಪರ ಚಳುವಳಿಗಳನ್ನು ಮುನ್ನಡೆಸಿ ಗೆಲುವನ್ನು ಸಾಧಿಸಿದೆ. ಇತ್ತೀಚೆಗಿನ ಸುರತ್ಕಲ್ ಟೋಲ್ ಗೇಟ್ ವಿರುದ್ಧದ ಹೋರಾಟ ಐತಿಹಾಸಿಕ ಗೆಲುವನ್ನು ಸಾಧಿಸಿ ಈವರೆಗೆ ಸುಮಾರು 84 ಕೋಟಿಗಳಷ್ಟು ಹಣವನ್ನು ಜನರ ಜೇಬಿನಿಂದ ಸುಲಿಯುವ ಯೋಜನೆಗೆ ಅಂತ್ಯ ಇಟ್ಟಿದೆ. ಆರೋಗ್ಯದ ಪ್ರಶ್ನೆಯಲ್ಲಿ ಖಾಸಗೀ ಆಸ್ಪತ್ರೆಗಳ ಸುಲಿಗೆ ನೀತಿಯ ವಿರುದ್ಧವೂ ದಿನನಿತ್ಯದ ಮದ್ಯಪ್ರವೇಶವನ್ನು ಡಿವೈಎಫ್ಐ ಮುನ್ನಡೆಸುತ್ತಿದೆ. ಡಿವೈಎಫ್ಐ ನಡೆಸುವ ಚಳುವಳಿಯನ್ನು ಇನ್ನಷ್ಟು ಮುನ್ನಡೆಸಲು 12 ನೇ ಕರ್ನಾಟಕ ರಾಜ್ಯ ಸಮ್ಮೇಳನವು ಈ ಬಾರಿ ಮಂಗಳೂರಿನಲ್ಲಿ ನಡೆಯಲಿದ್ದು ಈ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳನ್ನು ಪ್ರತಿನಿಧಿಸಿ ಭಾಗವಹಿಸುವ ಪ್ರತಿನಿಧಿಗಳು ಯುವಜನರನ್ನು ಕಾಡುವ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಲಿದ್ದಾರೆ ಮತ್ತು ಯುವಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಸರಕಾರಗಳ ವಿರುದ್ಧ ಹೋರಾಟಗಳನ್ನು ರೂಪಿಸಲಿದ್ದಾರೆ ಎಂದರು.
ವೇದಿಕೆಯಲ್ಲಿ ಡಿವೈಎಫ್ಐ ದ.ಕ. ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಕಾರ್ಮಿಕ ಮುಖಂಡರಾದ ಜೆ ಬಾಲಕೃಷ್ಣ ಶೆಟ್ಟಿ, ಡಿವೈಎಫ್ಐ ಮಂಗಳೂರು ನಗರ ಅಧ್ಯಕ್ಷರಾದ ಜಗದೀಶ್ ಬಜಾಲ್ , ಬಜಾಲ್ ಘಟಕದ ಅಧ್ಯಕ್ಷರಾದ ದೀಕ್ಷಿತ್ ಭಂಡಾರಿ, ಕಾರ್ಯದರ್ಶಿ ಆನಂದ ಎನೆಲ್ಮಾರ್ ಉಪಸ್ಥಿತರಿದ್ದರು.
ಸಿದ್ದತಾ ಸಭೆಯ ನೇತೃತ್ವವನ್ನು ಡಿವೈಎಫ್ಐ ಸ್ಥಳೀಯ ಮುಖಂಡರಾದ ಧಿರಾಜ್ ಬಜಾಲ್, ಪ್ರಕಾಶ್ ಶೆಟ್ಟಿ, ದೀಪಕ್ ಬಜಾಲ್, ಕೃಷ್ಣ, ಪ್ರಿತೇಶ್ ಬಜಾಲ್, ಅಶೋಕ್ ಎನೆಲ್ಮಾರ್ , ನೂರುದ್ದೀನ್ ಪಕ್ಕಲಡ್ಕ ಮುಂತಾದವರು ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು