1:52 PM Tuesday21 - January 2025
ಬ್ರೇಕಿಂಗ್ ನ್ಯೂಸ್
ಕಾಂತಾರ: ಚಾಪ್ಟರ್ 1 ಸಿನಿಮಾ ತಂಡ ಷರತ್ತು ಉಲ್ಲಂಘಿಸಿದರೆ ಚಿತ್ರೀಕರಣ ಸ್ಥಗಿತ: ಅರಣ್ಯ… ನಂಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ: ಡಿಸಿಎಂ ಡಿ.ಕೆ.… ಮಹಾತ್ಮ ಗಾಂಧಿ ರಿಯಲ್ ಗಾಂಧಿ, ಸೋನಿಯಾ, ರಾಹುಲ್, ಪ್ರಿಯಾಂಕ ಅವರು ನಕಲಿ ಗಾಂಧಿಗಳು:… ಬೆಂಗಳೂರು ಐಟಿ ಹಬ್, ವ್ಯೂಹಾತ್ಮಕ ನಗರ; ಇಲ್ಲೇ ಐಕ್ಯಾಟ್ ಕೇಂದ್ರ ಖಚಿತ: ಕೇಂದ್ರ… ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ 5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ… ಮಂಗಳೂರಿನ ಜನತೆಗೆ ಕಲುಷಿತ ನೀರು ಪೂರೈಕೆ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ… ಭಾರತಿ ಏರ್‌ಟೆಲ್ ಮತ್ತು ಬಜಾಜ್ ಫೈನಾನ್ಸ್ ನಿಂದ ಹಣಕಾಸಿನ ಸೇವೆಗಳಿಗಾಗಿ ಅತಿದೊಡ್ಡ ಡಿಜಿಟಲ್… ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ…

ಇತ್ತೀಚಿನ ಸುದ್ದಿ

ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆಪೂರಕ: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ರೀಡಾಕೂಟದಲ್ಲಿ ಅಶ್ವಿನ್ ನಾಯ್ಕ್

28/01/2024, 23:26

ಮಂಗಳೂರು(reporterkarnataka.com): ಯಾವುದೇ ಕ್ರೀಡೆ ಮಾನಸಿಕ ದೈಹಿಕ ಆರೋಗ್ಯಕ್ಕೆ ಪೂರಕ ಎಂದು ಅಂತಾರಾಷ್ಟ್ರೀಯ ಮೋಟಾರ್ ರ್ಯಾಲಿ ಚ್ಯಾಂಪಿಯನ್ ಅಶ್ವಿನ್ ನಾಯ್ಕ್ ಹೇಳಿದರು.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ನೆಹರು ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ ವನ್ನುದ್ದೇಶಿಸಿ ಮಾತನಾಡಿದರು.
ಪತ್ರಕರ್ತರ ಒತ್ತಡದ ಕಾರ್ಯ ನಿರ್ವಹಣೆಯ ನಡುವೆ ವಾರ್ಷಿಕ ಕ್ರೀಡಾ ಕೂಟ ಹಮ್ಮಿಕೊಂಡಿರುವುದು ಉತ್ತಮ.ಈ ಕ್ರೀಡಾ ಕೂಟದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದಕ್ಕೆ ಸಂತಸವಾಗಿದೆ ಎಂದು ಅಶ್ವಿನ್ ನಾಯ್ಕ್ ತಿಳಿಸಿದ್ದಾರೆ.
ಸಮಾರಂಭವನ್ನು ಉದ್ಘಾಟಿಸಿದ ಅದಾನಿ ಸಮೂಹ ಸಂಸ್ಥೆಯ ದಕ್ಷಿಣ ಭಾರತದ ಅಧ್ಯಕ್ಷ ಕಿಶೋರ್ ಆಳ್ವ ಶುಭ ಹಾರೈಸಿದರು. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಹಿರಿಯ ಕ್ರೀಡಾಪಟು ಕಸ್ತೂರಿ ಬಾಲಕೃಷ್ಣ ಪೈ,ದತ್ತಾತ್ರೇಯ, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ದ.ಕ. ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ , ರಾಜೇಶ್ ಪೂಜಾರಿ,ಕಾರ್ಯಕ್ರಮ ಸಂಯೋಜಕರಾದ ವಿಲ್ಫೆಡ್ ಡಿ ಸೋಜ, ದಯಾ ಕುಕ್ಕಾಜೆ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು