ಇತ್ತೀಚಿನ ಸುದ್ದಿ
ನಂಜನಗೂಡು: ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡಲು ಕಾರ್ಯಕರ್ತರು ಮತ್ತು ಮುಖಂಡರಿಗೆ ಸಚಿವರ ಎಚ್. ಸಿ. ಮಹಾದೇವಪ್ಪ ಸಲಹೆ
29/01/2024, 21:31
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ಮುಂಬರುವ ಲೋಕಸಭಾ ಚುನಾವಣೆ, ಸ್ಥಳೀಯ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಒಗ್ಗಟಿನಿಂದ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಾರ್ಯಕರ್ತರು ಮತ್ತು ಮುಖಂಡರ ಜವಾಬ್ದಾರಿಯಾಗಿರುತ್ತದೆ. ನಂಜನಗೂಡಿನಲ್ಲಿ ಉತ್ತಮ ಶಾಸಕರನ್ನ ಆಯ್ಕೆ ಮಾಡಲಾಗಿದೆ ವೃತ್ತಿಯಲ್ಲಿ ವಕೀಲರಾಗಿ ಸೃಜನಶೀಲ ನಾಯಕತ್ವದ ಗುಣವನ್ನು ಬೆಳೆಸಿಕೊಂಡಿದ್ದಾರೆ. ಎಲ್ಲಾ ಕಾರ್ಯಕರ್ತರ ಮತ್ತು ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಾಲೂಕನ್ನು ಅಭಿವೃದ್ಧಿಯತ್ತ ಕೊಂಡೊಯ್ಯ ಬೇಕಾಗಿದೆ ಎಂದು ಉಸ್ತುವಾರಿ ಸಚಿವ ಎಚ್. ಸಿ. ಮಹದೇವಪ್ಪ ಹೇಳಿದರು.
ಇನ್ನೇನು ಕೆಲವೇ ತಿಂಗಳುಗಳ ಒಳಗಾಗಿ ಲೋಕಸಭಾ ಚುನಾವಣೆ ಘೋಷಣೆಯಾಗುತ್ತದೆ. ಈಗಾಗಲೇ ತಾಲೂಕಿನ ಅಭಿವೃದ್ಧಿಗೆ ಉಪ ಚುನಾವಣೆಯ ಸಂದರ್ಭದಲ್ಲಿ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿ ಅಭಿವೃದ್ಧಿ ಮಾಡಲಾಗಿದೆ. ಇನ್ನಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಮಾತನಾಡಿ ಅನುದಾನ ಬಿಡುಗಡೆ ಮಾಡಲಾಗುವುದು. ನಂಜನಗೂಡು ತಾಲೂಕನ್ನ ಅಭಿವೃದ್ಧಿಯಲ್ಲಿ ಉನ್ನತ ಶ್ರೇಣಿಗೆ ತೆಗೆದುಕೊಂಡು ಹೋಗುವುದು ನಮ್ಮ ಆದ್ಯ ಕರ್ತವ್ಯ ಎಂದರು.
ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ನಾನು ಚುನಾವಣೆಯ ಸಂದರ್ಭದಲ್ಲಿ ಎಚ್ ಸಿ ಮಹದೇವಪ್ಪ ಸಾಹೇಬರ ಅನುಪಸ್ಥಿತಿಯಲ್ಲಿ ಎಲ್ಲಾ ಕಾರ್ಯಕರ್ತರನ್ನ ಒಗ್ಗಟ್ಟಿನಿಂದ ಕೊಂಡ ಇದು ತಾಲೂಕನ್ನು ಅಭಿವೃದ್ಧಿಪಡಿಸಿ ಕಾಂಗ್ರೆಸ್ ಪಕ್ಷವನ್ನು ಪ್ರಬಲವಾಗಿ ಸಂಘಟಿಸುವ ಭರವಸೆಯನ್ನು ನೀಡಲಾಗಿದೆ. ಅದೇ ರೀತಿ ನಡೆದುಕೊಳ್ಳುತ್ತೇನೆ ಎಂದು ಸಂದರ್ಭದಲ್ಲಿ ಶಾಸಕರು ಮಾತನಾಡಿದರು.
ಸಭೆಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಪಕ್ಷದ ಮುಖಂಡರು ಮತ್ತು ಉದ್ಯಮಿಗಳಾದ ಇಂದನ್ ಬಾಬು ಕಾಂಗ್ರೆಸ್ ಮುಖಂಡರಾದ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾದ ಬುಲೆಟ್ ಮಹದೇವಪ್ಪ ಸೇರಿದಂತೆ ಸಾಕಷ್ಟು ಮುಖಂಡರು ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
*ತಾಲೂಕು ಪಂಚಾಯಿತಿಯ ಶಾಸಕರ ಕಚೇರಿಗೆ ಭೇಟಿ*:
ನಂತರ ಶಾಸಕ ದರ್ಶನ್ ದ್ರುವ ನಾರಾಯಣ್ ರವರ ತಾಲೂಕು ಪಂಚಾಯಿತಿ ಕಚೇರಿಯಲ್ಲಿರುವ ಪಕ್ಷದ ಕಚೇರಿಗೆ ಭೇಟಿ ನೀಡಿದ ಸಚಿವರು ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಮನವಿ ಪತ್ರ ಸ್ವೀಕರಿಸಿ ಸ್ಥಳದಲ್ಲಿಯೇ ಕೆಲವು ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಕಾರ್ಯಗಳ ಪರಿಹಾರಕ್ಕೆ ಅಧಿಕಾರಿಗಳಿಗೆ ಸ್ಥಳದಲ್ಲಿ ಸೂಚಿಸಿದರು.