ಇತ್ತೀಚಿನ ಸುದ್ದಿ
ನಂಜನಗೂಡು ಹಲ್ಲರೆ ಗ್ರಾಮದಲ್ಲಿ ಕಿಡಿಗೇಡಿಗಳಿಂದ ಮನೆಗಳಿಗೆ ಕಲ್ಲು ತೂರಾಟ: ವಾಹನಗಳು ಜಖಂ, ಹಲವರಿಗೆ ಗಾಯ; ಉದ್ವಿಗ್ನ ಪರಿಸ್ಥಿತಿ
30/01/2024, 15:52
*ಕಿಡಿಗೇಡಿಗಳು ಪುಂಡರು ದೊಣ್ಣೆ ಮಾರಕಸ್ತ್ರಗಳನ್ನು ಹಿಡಿದು ಬಡಾವಣೆಗಳಿಗೆ ನುಗ್ಗಿ ಅಟ್ಟಹಾಸ ಮೆರೆದರು ಮೌನಕ್ಕೆ ಶರಣಾದ ನಂಜನಗೂಡು ಪೊಲೀಸರು*
*ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ*
*ಹತ್ತಕ್ಕೂ ಹೆಚ್ಚು ಮಂದಿಗೆ ಕಲ್ಲೇಟು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು*
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆಯಾಗಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಾಸದ ಮನೆಗಳಿಗೆ ಕಲ್ಲು ತೂರಾಟ ನಡೆಸಿ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಂಡಿದೆ. ಕೆಲ ಕಿಡಿಗೇಡಿಗಳಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಗ್ರಾಮದ ಬೀದಿಯಲ್ಲೂ ಕಲ್ಲು ತೂರಾಟ ಮಾಡಲಾಗಿದ್ದು, ಹಲವರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಂಜನಗೂಡು ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಮೈಸೂರಿನ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಉಪ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಹಲ್ಲರೆ ಗ್ರಾಮದಲ್ಲಿ ಬಿಡು ಬಿಟ್ಟಿದ್ದಾರೆ. ಅಲ್ಲಾರೆ ಗ್ರಾಮದಲ್ಲಿ ಪದೇ ಪದೇ ಇಂತಹ ಕಲುಷಿತ ವಾತಾವರಣ ನಿರ್ಮಾಣವಾದರೂ ನಂಜನಗೂಡು ಗ್ರಾಮಾಂತರ ಪೊಲೀಸರ ನಿರ್ಲಕ್ಷ ಕಾರ್ಯಕ್ರಮ ಎತ್ತಿ ತೋರಿಸುತ್ತಿದೆ.
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.