2:54 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀ ನಂಜುಂಡೇಶ್ವರನ ಸನ್ನಿಧಿಯಲ್ಲಿ ಸಾಮೂಹಿಕ ವಿವಾಹ: ನವ ಜೀವನಕ್ಕೆ ಕಾಲಿಟ್ಟ 8 ಜೋಡಿಗಳು

31/01/2024, 15:19

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಾಂ

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಮಾಂಗಲ್ಯ ಭಾಗ್ಯ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನವ ಜೀವನಕ್ಕೆ ಎಂಟು ಜೋಡಿಗಳು ಕಾಲಿಟ್ಟಿದ್ದಾರೆ.


ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಹಾಗೂ ಜಿಲ್ಲಾಡಳಿತ ಮೈಸೂರು ಇವರ ಸಹಯೋಗದಲ್ಲಿ ಮಾಂಗಲ್ಯ ಭಾಗ್ಯ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು.
ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಅಪರ ಜಿಲ್ಲಾಧಿಕಾರಿ ಲೋಕನಾಥ್ ಸೇರಿದಂತೆ ಮತ್ತಿತರ ಗಣ್ಯರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು
ಬಳಿಕ ವಧುವರರಿಗೆ ಮಾಂಗಲ್ಯ ವಿತರಣೆ ಮಾಡಿದ ಗಣ್ಯರು
ಪುರೋಹಿತರ ಮಂತ್ರಘೋಷ ಹಾಗೂ ಗಟ್ಟಿ ಮೇಳದೊಂದಿಗೆ ಮಾಂಗಲ್ಯ ದಾರಣೆ ನಡೆಯಿತು.
ತಾಳಿ ಕಟ್ಟಿದ ವಧು ಮತ್ತು ವರರಿಗೆ ನೆರದಿದ್ದ ಜನರು ಮತ್ತು ಗಣ್ಯರು ಶುಭ ಹಾರೈಸಿದರು.
ಶಶಿಧರ್ ದೀಕ್ಷಿತ್ ನೇತೃತ್ವದಲ್ಲಿ ನವ ದಂಪತಿಗಳಿಗೆ ಶಾಸ್ತ್ರೋಕ್ತವಾಗಿ ಮದುವೆ ಮಾಡಿಸಲಾಯಿತು.
ಬಳಿಕ ಶಾಸಕ ದರ್ಶನ್ ದ್ರುವನಾರಾಯಣ್ ಹಾಗೂ ಅಪರ ಜಿಲ್ಲಾಧಿಕಾರಿ ಲೋಕನಾಥ್ ಮಾತನಾಡಿ ನೂತನ ವಧು ವರರಿಗೆ ಆಶೀರ್ವದಿಸಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು
ಮದುವೆಗೆ ಆಗಮಿಸಿದ ಎಲ್ಲರಿಗೂ ದಾಸೋಹ ಭವನದಲ್ಲಿ ಹೋಳಿಗೆ ಊಟವನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಲೋಕನಾಥ್, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ದೇವಾಲಯದ ಅರ್ಚಕರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು