2:08 PM Friday31 - October 2025
ಬ್ರೇಕಿಂಗ್ ನ್ಯೂಸ್
Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ… New Delhi | ಸೌರ ಗುರಿಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತವೇ ಮುಂಚೂಣಿ:… ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ;… ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್‌ ಗೆ 4-5 ಸಾವಿರ…

ಇತ್ತೀಚಿನ ಸುದ್ದಿ

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನೇ ಅತ್ಯಾಚಾರವೆಸಗಿ ಹಣ ತರುವಂತೆ ಬ್ಲ್ಯಾಕ್ ಮೇಲ್ : ಪತ್ನಿ ಜತೆ ಶಿಕ್ಷಕನ ಬಂಧನ

09/08/2021, 13:17

ಕಡಬ(reporterkarnataka.com) : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ನಂತರ ಆಕೆಯ ನಗ್ನ ಪೋಟೋ ತೆಗೆದು ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪದ ಮೇಲೆ ಶಿಕ್ಷಕ ಹಾಗೂ ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸುಬ್ರಹ್ಮಣ್ಯದ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಗುರುರಾಜ್‌ ಎಂಬ ಶಿಕ್ಷಕ ಪ್ರಾಜೆಕ್ಟ್‌ ವರ್ಕ್‌ ನೆಪದಲ್ಲಿ ವಿದ್ಯಾರ್ಥಿನಿಯನ್ನು ಉಪಾಯದಲ್ಲಿ ಮನೆಗೆ ಕರೆಸಿಕೊಂಡಿದ್ದಾನೆ. ಈ ವೇಳೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತರ ಆಕೆಯ ನಗ್ನ  ಪೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾನೆ.

ರಾಯಚೂರು ಮೂಲದ ಈ ದುಷ್ಟ ಶಿಕ್ಷಕ ನಂತರ ಪದೇ ಪದೇ ವಿದ್ಯಾರ್ಥಿನಿಗೆ ಪೋಟೋ ತೋರಿಸಿ ಬ್ಲ್ಯಾಕ್ ಮೇಲ್ ನಡೆಸಿದ್ದಾನೆ.ಹಣ ತರುವಂತೆ ಪೀಡಿಸಿದ್ದಾನೆ. ಇದಕ್ಕೆಆತನ ಪತ್ನಿ ಕೂಡ ಸಾಥ್ ನೀಡಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. 

ಇದೀಗ ವಿದ್ಯಾರ್ಥಿನಿ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಶಿಕ್ಷಕ ಗುರುರಾಜ್‌ ಹಾಗೂ ಆತನ ಪತ್ನಿ ರಾಜೇಶ್ವರಿಯನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು