ಇತ್ತೀಚಿನ ಸುದ್ದಿ
ನಂಜನಗೂಡು: ಸುಮಾರು 1.75 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಭೂಮಿ ಪೂಜೆ
01/02/2024, 19:12
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ನಂಜನಗೂಡು ತಾಲೂಕು ದೊಡ್ಡ ಕವಲಂದೆ ಗ್ರಾಮದಲ್ಲಿ ಸುಮಾರು ಒಂದು ಕೋಟಿ ಎಪ್ಪತ್ತೈದು ಲಕ್ಷ ರೂಪಾಯಿ ವೆಚ್ಚದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಅಂಗನವಾಡಿ ಕೇಂದ್ರದ ಕಟ್ಟಡ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ ನೆರವೇರಿಸಿದರು.
ಒಂದು ಕೋಟಿ 58 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕಾಲೇಜು ಕೊಠಡಿಗಳು, ಪ್ರಯೋಗಾಲಯ ಹಾಗೂ ಶೌಚಾಲಯ ನಿರ್ಮಾಣ ಮತ್ತು 16 ಲಕ್ಷ ರೂಪಾಯಿ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು
ನಂತರ ಮಾತನಾಡಿದ ಅವರು ದೊಡ್ಡ ಕವಲಂದೆ ಗ್ರಾಮದಲ್ಲಿ ಕಾಲೇಜು ಸಿಬ್ಬಂದಿ ಹಾಗೂ ಗ್ರಾಮಸ್ಥರ ಒತ್ತಾಯದ ಮೇರೆಗೆ ಸುಮಾರು ಒಂದು ಕೋಟಿ 58 ಲಕ್ಷ ರೂಪಾಯಿ ವೆಚ್ಚದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಕೊಠಡಿಗಳು ಪ್ರಯೋಗಾಲಯ, ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದೇನೆ ಮತ್ತು 20 ಲಕ್ಷ ರೂಪಾಯಿ ವೆಚ್ಚದಲ್ಲಿ ಒಂದು ಅಂಗನವಾಡಿ ಕಟ್ಟಡಕ್ಕೂ ಸಹ ಭೂಮಿ ಪೂಜೆ ನೆರವೇರಿಸಿದ್ದೇನೆ ಈ ಭಾಗದ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಈ ಸಂದರ್ಭ ಗ್ರಾಮಪಂಚಾಯಿತಿ ಅಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷರಾದ ಪ್ರಶಾಂತ್, ಬ್ಲಾಕ್ ಅಧ್ಯಕ್ಷರಾದ ಕುರಟ್ಟಿ ಮಹೇಶ್, ಗ್ರಾಮದ ಮುಖಂಡರುಗಳಾದ ಅಜಮುಲ್ಲಾ ಖಾನ್, ನಸ್ರುಲ್ಲಾ ಖಾನ್, ಶಂಕರ್ ನಾಯಕ್, ನಜೀಮ್, ಮಂಜುನಾಥ್, ಪ್ರಾಂಶುಪಾಲರಾದ ಸಿದ್ದರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.