ಇತ್ತೀಚಿನ ಸುದ್ದಿ
ಹುಬ್ಬಳ್ಳಿ; ಶ್ರೀಮದ್ ಮಹಾರಾಜ ನಿರಂಜನ ಜಗದ್ಗುರು ಫಕೀರ ಸಿದ್ದರಾಮಶ್ರೀಗಳ ಅಮೃತ ಮಹೋತ್ಸವ
01/02/2024, 22:20
ಅನುಷಾ ಪಾಟೀಲ್ ಹುಬ್ಬಳ್ಳಿ
info.reporterkarnataka@gmail.com
ಇಲ್ಲಿನ ಶಿರಹಟ್ಟಿಯ ಭಾವೈಕ್ಯತಾ ಸಂಸ್ಥಾನ ಮಹಾಪೀಠದ ಶ್ರೀಮದ್ ಮಹಾರಾಜ ನಿರಂಜನ ಜಗದ್ಗುರು ಫಕೀರ ಸಿದ್ದರಾಮಶ್ರೀಗಳ ಅಮೃತ ಮಹೋತ್ಸವ ಕಾರ್ಯಕ್ರಮ ನಗರದ ನೆಹರು ಮೈದಾನದಲ್ಲಿ ನಡೆಯಿತು.
ಶ್ರೀಮಠದಿಂದ ಭಾವೈಕ್ಯದ ರಥಯಾತ್ರೆ, ಅಂಬಾರಿ ಉತ್ಸವ ಜರುಗಿತು. ಕಾರ್ಯಕ್ರಮದಲ್ಲಿ ಶ್ರೀಮದ್ ನಿರಂಜನ ಜಗದ್ಗುರು ಡಾ.ಗುರುಸಿದ್ದರಾಜಯೋಗೀಂದ್ರ ಶ್ರೀಗಳು, ಪರಮಪೂಜ್ಯ ಫಕೀರ ದಿಂಗಾಲೇಶ್ವರ ಶ್ರೀಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ಬಿಜೆಪಿ ರಾಜಾದ್ಯಕ್ಷ ಬಿ. ವೈ. ವಿಜಯೇಂದ್ರ ಯಡಿಯೂರಪ್ಪ, ವಿವಿಧ ಮಠಗಳ ಪರಮಪೂಜ್ಯ ಶ್ರೀಗಳು, ಸಮಾಜದ ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.