7:04 AM Tuesday29 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ: ಪುತ್ತೂರು ಸಹಾಯಕ ಕಮೀಷನರ್

02/02/2024, 16:28

*ಗ್ರಾಮ ವಾಸ್ತವ್ಯದ ಪೂರ್ವಭಾವಿಯಾಗಿ ಎಸಿ ನೇತೃತ್ವದಲ್ಲಿ‌ ಅಧಿಕಾರಿಗಳ ಸಭೆ*

ಸುಳ್ಯ(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಫೆ.10ರಂದು ನಡೆಯುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡುವುದಾಗಿ ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಹೇಳಿದ್ದಾರೆ.

ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪೂರ್ವಭಾವಿಯಾಗಿ ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜನರಿಂದ ಬರುವ ಅರ್ಜಿಗಳನ್ನು ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಮಾಡುವ ಪ್ರಯತ್ನ ಮಾಡಲಾಗುವುದು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳೊಂದಿಗೆ ಭಾಗವಹಿಸಬೇಕು. ವಿವಿಧ ಇಲಾಖೆಗಳ ಸ್ಟಾಲ್‌ಗಳನ್ನು ತೆರೆದು ಇಲಾಖೆಗಳ ಮಾಹಿತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಿವರಿಸಿದರು.
ಗ್ರಾಮ ವಾಸ್ತವ್ಯದ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು.
ತಹಶೀಲ್ದಾರ್ ಜಿ.ಮಂಜುನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ನಂದಕುಮಾರ್, ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ವಿಮಲ್ ಬಾಬು, ಆರ್.ಗಿರೀಶ್, ಪಶುವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ನಿತಿನ್‌ ಪ್ರಭು, ಸಿಡಿಪಿಒ ಶೈಲಜಾ ದಿನೇಶ್ ಕುಕ್ಕುಜಡ್ಕ, ಲೋಕೋಪಯೋಗಿ ಇಲಾಖೆಯ ಸಹಾಯಕ‌ ಕಾರ್ಯನಿರ್ವಾಹಕ‌ ಇಂಜಿನಿಯರ್ ಗೋಪಾಲ, ಜಿ.ಪಂ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರುಕ್ಕು, ಸಹಾಯಕ ಇಂಜಿನಿಯರ್ ಮಣಿಕಂಠ, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಶಿಕ್ಷಣ ಸಂಯೋಜಕಿ ಸಂಧ್ಯಾ ಕುಮಾರಿ, ತಾಲೂಕು ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಸಮಾಜ
ಕಲ್ಯಾಣ ಇಲಾಖೆಯ ಅರ್ಷಿಯಾ, ಗೀತಾ, ನಗರ ಪಂಚಾಯತ್‌ನ ತಿಮ್ಮಪ್ಪ,
ದ.ಕ.ಜಿಲ್ಲಾ‌ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್, ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ‌ ಕಲ್ನಾರ್, ಕಾರ್ಯದರ್ಶಿ ತೇಜೇಶ್ವರ ಕುಂದಲ್ಪಾಡಿ, ಕೋಶಾಧಿಕಾರಿ ಪ್ರಜ್ಞಾ ಎಸ್.ನಾರಾಯಣ, ಮಾಜಿ ಅಧ್ಯಕ್ಷರಾದ ಪದ್ಮನಾಭ ಮುಂಡೋಕಜೆ, ಕೃಷ್ಣ ಬೆಟ್ಟ, ಸದಸ್ಯ ಮಿಥುನ್ ಕರ್ಲಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು