10:14 PM Monday22 - September 2025
ಬ್ರೇಕಿಂಗ್ ನ್ಯೂಸ್
ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಹೆಚ್ಚುತ್ತಿರುವ ಕಾಡಾನೆ ಹಾವಳಿ; 5-6 ಗ್ರಾಮಗಳಿಗೆ 2 ಡಜನ್ ಸಲಗ ಲಗ್ಗೆ

03/02/2024, 15:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಜಾಸ್ತಿಯಾಗಿದೆ. ಅರಣ್ಯ ಇಲಾಖೆಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹೈ ಅಲರ್ಟ್, ಮೈಕ್ ಅನೌನ್ಸ್ ಮೆಂಟ್ ಮಾಡಲಾಗುತ್ತಿದೆ.


ತೋರಣಮಾವು ಗ್ರಾಮಕ್ಕೆ ಬೀಟಮ್ಮ ಟೀಮ್ ಲಗ್ಗೆಯಿಟ್ಟಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆಯಿಂದಿರಲು ಅನೌನ್ಸ್ ಮಾಡುತ್ತಿದೆ. ಅನಾವಶ್ಯಕವಾಗಿ ರಸ್ತೆ ಗಿಳಿಯದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಬೆಳಗ್ಗೆ ಬೇಗನೆ ಕಾರ್ಮಿಕರು ಕಾಫಿ ತೋಟಕ್ಕೆ ಹೋಗದಿರಲು ಸೂಚನೆ ನೀಡಲಾಗಿದೆ.


ಯಾವುದೇ ಸಮಯದಲ್ಲಿ ಕಾಫಿ ತೋಟಕ್ಕೆ ನುಗ್ಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಳ್ಳಿಗಳನ್ನು ಸುತ್ತಿ
ಅರಣ್ಯ ಇಲಾಖೆ ಸಿಬ್ಬಂದಿಗಳು ಸೂಚನೆ ನೀಡುತ್ತಿದ್ದಾರೆ.
ಐದಾರು ಗ್ರಾಮಗಳ ವ್ಯಾಪ್ತಿಯಲ್ಲಿ 24 ಆನೆಗಳ ಸಂಚಾರ ಮಾಡುತ್ತಿವೆ ಎಂದು ಅಂದಾಜಿಸಲಾಗಿದೆ. ತೋರಣ ಮಾವು, ಕೋಡುವಳ್ಳಿ, ಗೌತಮೇಶ್ವರ, ಅಣೂರು, ದಿಣ್ಣೆಕೆರೆ ಗ್ರಾಮಗಳಲ್ಲಿ ಕಾಡಾನೆಗಳ ಆತಂಕ ಹೆಚ್ಚಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು