3:41 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ ದ.ಕ . ಪತ್ರಕರ್ತರ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರ ಬಿಡುಗಡೆ

03/02/2024, 23:44

ದಾವಣಗೆರೆ(reporterkarnataka.com):ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್ , ದ.ಕ ಜಿಲ್ಲಾ ಪೊಲೀಸ್ ಇಲಾಖೆ ಹರಿಹರ, ಕೊಲ್ಲಮೊಗರು ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೊಲ್ಲಮೊಗರುವಿನ ಬಂಗ್ಲೆ ಗುಡ್ಡೆ ಸರಕಾರಿ ಶಾಲಾ ವಠಾರದಲ್ಲಿ ಫೆ.10ರಂದು ನಡೆಯಲಿರುವ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಮಾವೇಶದಲ್ಲಿ ಶನಿವಾರ ಬಿಡುಗಡೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದಾವಣಗೆರೆ ಉಸ್ತುವಾರಿ ಸಚಿವ ಮಲ್ಲಿಕಾರ್ಜುನಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅದ್ಯಕ್ಷ ಶಿವಾನಂದ್ ತಗಡೂರು, ಮಾಜಿ ಸಚಿವ ಶಾಮನೂರು ಶಿವ ಶಂಕರಪ್ಪ, ದಕ್ಷಿಣ ಕನ್ನಡ ಜಿಲ್ಲೆ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು