ಇತ್ತೀಚಿನ ಸುದ್ದಿ
ಹೆಬ್ರಿ ಸೀತಾನದಿಯಲ್ಲಿ ಅಕ್ರಮ ಮರಳುಗಾರಿಕೆ: ಒಬ್ಬನ ಬಂಧನ
05/02/2024, 15:42
ಹೆಬ್ರಿ(reporterkarnataka.com): ಹೊಳೆಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತಿದ್ದ ಘಟನೆ ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮದ ಸೀತಾನದಿ ಎಂಬಲ್ಲಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿ ಮಾನಸ್ ಎಂಬವರನ್ನು ಬಂಧಿಸಲಾಗಿದೆ.
ಹೆಬ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಮಹಾಂತೇಶ ಜಾಬಗೌಡ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಫೆ. 4ರಂದು ಸಂಜೆ ಯಾವುದೇ ಪರವಾನಿಗೆಯನ್ನು ಪಡೆಯದೆ ಸೀತಾನದಿ ಹೊಳೆಯಿಂದ ಮರಳನ್ನು ಕಳವು ಮಾಡಿ ಲಾರಿಗೆ ತುಂಬಿಸಿ ಸಾಗಾಟ ಮಾಡುತ್ತಿದ್ದರು.
ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.