10:27 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಡಿವೈಎಫ್ ಐ ರಾಜ್ಯ ಸಮ್ಮೇಳನ: ‘ಸಾಂಗತ್ಯ 2024’ ಕ್ರೀಡಾಕೂಟ ಸಮಾರೋಪ

05/02/2024, 21:32

ಮಂಗಳೂರು(reporterkarnataka.com): ಡಿವೈಎಫ್ ಐ ರಾಜ್ಯ ಸಮ್ಮೇಳನದ ಭಾಗವಾಗಿ ಡಿವೈಎಫ್ ಐ ಉಳ್ಳಾಲ ತಾಲೂಕು ಸಮಿತಿಯಿಂದ ಆಯೋಜಿಸಲ್ಪಟ್ಟ ಸಾಂಗತ್ಯ 2024 ಕ್ರೀಡಾಕೂಟ ಸಮಾರೋಪಗೊಂಡಿತು.


ಕ್ರೀಡಾಕೂಟದ ಉದ್ಘಾಟನೆಯನ್ನು ರಾಷ್ಟ್ರೀಯ ವೈಟ್ಲಿಫ್ಟರ್ ನಿಶೆಲ್ ಡೆಲ್ಫಿನ್ ಡಿಸೋಜ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ತಾಲೂಕು ಅಧ್ಯಕ್ಷ ರಝಾಕ್ ಮೊಂಟೆಪದವು, ಟ್ವೈಕೊಂಡೊ ಪಟು ಆಸಿಫ್ ಕಿನ್ಯ,ರಾಷ್ಟ್ರೀಯ ಕಬಡ್ಡಿ ಆಟಗಾರ ಗೋಪಿನಾಥ್ ಕಾಪಿಕಾಡ್, ಉಳ್ಳಾಲ ತಾಲೂಕು ಮಟ್ಟದ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ರಾಮಚಂದ್ರ ಬಬ್ಬುಕಟ್ಟೆ, ಹರೇಕಳ ಗ್ರಾಮ ಪಂಚಾಯತ್ ಸದಸ್ಯರಾದ ಅಶ್ರಫ್ ಹರೇಕಳ ಉಪಸ್ಥಿತರಿದ್ದರು. ಕ್ರೀಡೆಯಲ್ಲಿ ಸಾಧನೆಗೈದವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಉಳ್ಳಾಲ ತಾಲೂಕಿನ ಸುಮಾರು 15 ಘಟಕಗಳು ಕ್ರೀಡೆಯಲ್ಲಿ ಭಾಗವಹಿಸಿದ್ದವು. ಕ್ರೀಡಾಕೂಟದಲ್ಲಿ ಯುವಕರಿಗೆ ಕ್ರಿಕೆಟ್, ವಾಲಿಬಾಲ್, ಹಗ್ಗಜಗ್ಗಾಟ, ರಿಲೇ, 200 ಮೀ ಓಟ,ಗೋಣಿಚೀಲ ಓಟ, ಗುಂಡೆಸೆತ ಮತ್ತು ಯುವತಿಯರಿಗೆ ತ್ರೋಬಾಲ್, ಹಗ್ಗಜಗ್ಗಾಟ, ರಿಲೇ, 200 ಮೀ ಓಟ, ಮಡಕೆ ಹೊಡೆಯುವುದು, ಸೂಪರ್ ಮಿನಿಟ್ ಹಾಗೂ ಶಾಲಾ ಮಟ್ಟದಲ್ಲಿ 3 ವಿಧದ ಪಂದ್ಯಗಳಿದ್ದವು. ಕುತ್ತಾರು ಬಟ್ಟೆದಡಿ ಘಟಕವು ಬರೋಬ್ಬರಿ 97 ಅಂಕ ಪಡೆದು ಚಾಂಪಿಯನ್ ಪಟ್ಟಕ್ಕೇರಿತು. ಅಭಿನಂದನೆಗಳು. ಕೊನೆಯಲ್ಲಿ ಸಮಾರೋಪ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ರಾಷ್ಟ್ರೀಯ ವಾಲಿಬಾಲ್ ಆಟಗಾರ ಪ್ರವೀಣ್ ಕುಮಾರ್, ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷ ಸುನೀಲ್ ಕುಮಾರ್ ಬಜಾಲ್, ಮುನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹಾಬಲ ದೆಪ್ಪಲಿಮಾರ್, ಸುಕುಮಾರ್ ತೊಕ್ಕೊಟ್ಟು, ರಮೇಶ್ ಉಳ್ಳಾಲ್ , ರಾಮಚಂದ್ರ ಬಬ್ಬುಕಟ್ಟೆ,ಜನಾರ್ದನ ಕುತ್ತಾರ್ ಉಪಸ್ಥಿತರಿದ್ದರು. ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲಾ ಘಟಕಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು