2:05 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕೋಲಕ್ಕೆ ಹೋದ ನನ್ನ ನಡೆಯನ್ನು ನೂರು ಜನ ಒಪ್ಪಿಕೊಂಡಿದ್ದಾರೆ, ಯಾರೋ ಒಬ್ಬ ಫೇಸ್‌ಬುಕ್‌ ಗೀಚಿದರೆ ಗೀಚಲಿ: ಸ್ಪೀಕರ್ ಖಾದರ್

05/02/2024, 21:53

ಬೆಂಗಳೂರು(reporterkarnataka.com): ಪನೋಲಿಬೈಲಿನ ಕೋಲದಲ್ಲಿ ಭಾಗವಹಿಸಿದ ನನ್ನ ನಡೆಯನ್ನು ನೂರು ಜನ ಒಪ್ಪಿಕೊಂಡಿದ್ದಾರೆ.
ನಮ್ಮ ಬ್ಲಾಕಿನ ಅಧ್ಯಕ್ಷರು ಅವರ ಧಾರ್ಮಿಕ ಭಾವನೆಗಳಿಗೆ ಅನುಗುಣವಾಗಿ ಒಂದು ಹರಕೆ ಇಟ್ಟಿದ್ದರು. ಅವರ ಹರಕೆಗೆ ಗೌರವ ನೀಡುವುದು ನಮ್ಮ ಸಂಸ್ಕೃತಿ. ಯಾರೋ ಒಬ್ಬ ಸಾಮಾಜಿಕ ಜಾಲತಾಣದಲ್ಲಿ ಗೀಚಿದರೆ, ನೂರು ಜನ ನನ್ನ ನಡೆಯನ್ನು ಒಪ್ಪಿದ್ದಾರೆ ಎಂದು ಸ್ಪೀಕ‌ರ್ ಯು.ಟಿ.ಖಾದರ್ ಹೇಳಿದರು.
ಬಂಟ್ವಾಳ ತಾಲೂಕಿನ ಪನೋಲಿ ಬೈಲ್‌ನಲ್ಲಿ ನಡೆದ ಕೋಲದಲ್ಲಿ ಭಾಗವಹಿಸಿದ್ದ ಯು.ಟಿ.ಖಾದರ್ ನಡೆಯನ್ನು ಖಂಡಿಸಿ ಸಾಲೆತ್ತೂರು ಫೈಝಿ ಅಲ್ ಹಮ್ಹಾನಿ ಎಂಬವರು ಫೇಸ್‌ಬುಕ್‌ನಲ್ಲಿ ಹಾಕಿರುವ ಪೋಸ್ಟ್ ಕುರಿತು ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
ಕೋಲಕ್ಕೆ ಹೋಗುವುದು ನಮ್ಮ ಸಂಸ್ಕತಿ. ಯಾರೋ ಒಬ್ಬ ಸಾಮಾಜಿಕ ಜಾಲತಾಣದಲ್ಲಿ ಗೀಚಿದರೆ, ನೂರು ಜನ ನನ್ನ ನಡೆಯನ್ನು ಒಪ್ಪಿದ್ದಾರೆ ಎಂದು ಖಾದರ್ ನುಡಿದರು.
ಸಾಮಾಜಿಕ ಜಾಲತಾಣದಲ್ಲಿ ಗೀಚುವವರನ್ನು ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಪ್ರಶ್ನೆ ಕೇಳುವವರನ್ನು ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಯಾರು ಕೆಲಸ ಮಾಡುತ್ತಾರೆ, ಯಾರು ಉತ್ತರ ಕೊಡುತ್ತಾರೋ ಅವರನ್ನು ಮಾತ್ರ ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುತ್ತದೆ ಎಂದು ಖಾದ‌ರ್ ಹೇಳಿದರು.
ಆ ಒಬ್ಬನಿಗೆ ಯಾಕೆ ಮಹತ್ವ ನೀಡಬೇಕು ಎಂದು ಪ್ರಶ್ನಿಸಿದ ಅವರು, ಅದರ ಅಗತ್ಯವು ಇಲ್ಲ. ಶೇ.99ರಷ್ಟು ಜನರು ಎಲ್ಲ ಧರ್ಮಗಳಿಗೆ ಗೌರವ ನೀಡುತ್ತಾ ನಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿಕೊಂಡು ಹೋಗುತ್ತಿದ್ದಾರೆ ಎಂದು ಖಾದರ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು