12:11 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ದ.ಕ.ಜಿಲ್ಲಾ ಪತ್ರಕರ್ತರ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರಿಕೆ ಸಚಿವ ಈಶ್ವರ ಖಂಡ್ರೆ ಬಿಡುಗಡೆ

05/02/2024, 23:44

ಮಂಗಳೂರು(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್ ಸುಳ್ಯ ತಾಲೂಕು ಪಂಚಾಯತ್, ದ.ಕ. ಜಿಲ್ಲಾ ಪೊಲೀಸ್ ಇಲಾಖೆ, ಹರಿಹರ, ಕೊಲ್ಲಮೊಗರು ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಸರಕಾರಿ ಶಾಲಾ ವಠಾರದಲ್ಲಿ ಫೆ.10ರಂದು ನಡೆಯಲಿರುವ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರವನ್ನು ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಹಾಗೂ ರಾಜ್ಯ ಸಭಾ ಸದಸ್ಯರು ಹಾಗೂ ಶ್ರೀ ಧರ್ಮಸ್ಥಳ ಕ್ಷೇತ್ರಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಧರ್ಮಸ್ಥಳದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಘೋಷಣೆ ಕಾರ್ಯಕ್ರಮದಲ್ಲಿಂದು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಡಾ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ಮಹಾತ್ಮಗಾಂಧಿಯವರು ಸಮಸ್ಯೆ ತಿಳಿಯಲು ದೇಶಾದ್ಯಂತ ಜನ ಸಾಮಾನ್ಯರು ಸಂಚರಿಸುತ್ತಿದ್ದ ತೃತೀಯ ದರ್ಜೆಯ ರೈಲು ಬೋಗಿಯಲ್ಲಿ ಜನರ ಬಳಿ ತೆರಳು ತ್ತಿದ್ದರು. ಅವರು ಜನರೊಂದಿಗೆ ಇದ್ದಾಗ ಜನ ಜೀವನ ಸಮಸ್ಯೆ ಅರ್ಥ ಮಾಡಿಕೊಳ್ಳಲು ಸಾಧ್ಯ. ಪತ್ರಕರ್ತರು ಗ್ರಾಮದ ಜನರ ಸಮಸ್ಯೆ ಬಗ್ಗೆ ಅರಿತು ಕೊಳ್ಳಲು ಗ್ರಾಮಕ್ಕೆ ತೆರಳಲು ಚಿಂತನೆ ಮಾಡಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಶ್ಲಾಘನೀಯ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಬೆಳ್ತಂಗಡಿ ತಾಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ , ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ ರಾವ್ ಪಂಚಾಯತ್ ಕಾರ್ಯ ದರ್ಶಿ ಡಾ.ರಘು ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು