6:55 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಮಸ್ಕಿ; ಕಾಂಗ್ರೆಸ್ ಪಕ್ಷದಿಂದ ಮುಂಬರುವ ಜಿಪಂ, ತಾಪಂ, ಪುರಸಭೆ ಚುನಾವಣೆ ಪೂರ್ವಭಾವಿ ಸಭೆ

09/08/2021, 21:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಮತದಾರರು ಮತ್ತೆ ಕಾಂಗ್ರೆಸ್ ಪಕ್ಷವನ್ನು ಆಶೇರ್ವದಿಸಬೇಕು. ಮತದಾರರನ್ನು ಹುರಿದುಂಬಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಹೇಳಿದರು.

ಮಸ್ಕಿಯ ಭ್ರಮರಾಂಬ ದೇವಸ್ಥಾನದ ವಠಾರದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಪುರಸಭೆ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ ಕ್ಷೇತ್ರದ ಜನತೆಗೆ ಅವರು ಅಭಿನಂದನೆಗಳು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ್, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರು, ಆರ್.ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಮಾತನಾಡಿದರು.

ಮಟ್ಟೂರು ಶರಣಪ್ಪ, ಕೆ.ಕರಿಯಪ್ಪ, ಬಸನಗೌಡ ಬಾದರ್ಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ,  ಹನುಮಂತಪ್ಪ ಮುದ್ದಾಪೂರು,  ಶೈಲಪ್ಪ ಬ್ಯಾಳಿ, ಸಿದ್ದಣ್ಣ ಹೂವಿನಭಾವಿ, ನಿರುಪಾದಪ್ಪ ವಕೀಲರು, ಮೈಬುಸಾಬ ಮುದ್ದಾಪೂರು, ಹನುಮೇಶ ಬಾಗೋಡಿ, ಕೃಷ್ಣ ಡಿ.ಚಿಗರಿ‌, ಬಸನಗೌಡ ಮುದವಾಳ, ದುರುಗೇಶ ವಕೀಲರು, ಪಂಪನಗೌಡ ಉದ್ದಿಹಾಳ, ಶಿವಣ್ಣ ನಾಯಕ್, ಬಸನಗೌಡ ಮಾರಲದಿನ್ನಿ ಹಾಗೂ ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು