12:23 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ತಣ್ಣೀರುಬಾವಿ: ಆಮೆ ಮೊಟ್ಟೆ ರಕ್ಷಣಾ ಸ್ಥಳಕ್ಕೆ ಅರಣ್ಯ ಸಚಿವ ಖಂಡ್ರೆ ಭೇಟಿ; ಅರಣ್ಯ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ

07/02/2024, 11:21

ಮಂಗಳೂರು(reporterkarnataka.com): ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ ಅರಣ್ಯ ಇಲಾಖೆ ಸಂರಕ್ಷಣೆ ಮಾಡಿರುವ ಆಲೀವ್ ರೆಡ್ ಲೇ ಆಮೆಯ ಮೊಟ್ಟೆಗಳ ಸ್ಥಳವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದಲ್ಲಿರುವ ಸಚಿವರು ಸೋಮವಾರ ತಡರಾತ್ರಿ ತಣ್ಣೀರು ಬಾವಿ ಅತಿಥಿ ಗೃಹಕ್ಕೆ ವಿಶ್ರಾಂತಿಗೆ ಆಗಮಿಸಿದಾಗ, ಅಧಿಕಾರಿಗಳು ತಣ್ಣೀರುಬಾವಿ ಬೀಚ್ ನಲ್ಲಿ ಅಪರೂಪದ ಆಲೀವ್ ರೆಡ್ ಲೇ ಆಮೆ 1985ರ ಬಳಿಕ ಇದೇ ಮೊದಲ ಬಾರಿಗೆ ಸಾವಿರಾರು ಮೊಟ್ಟೆ ಇಟ್ಟಿದ್ದು, ಇದನ್ನು ಸಂರಕ್ಷಿಸಿರುವುದಾಗಿ ತಿಳಿಸಿದರು. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಚಿವರು ಪರಿಶೀಲಿಸಿ, ಈ ಮೊಟ್ಟೆಗಳು ಮರಿಯಾದ ಬಳಿಕ ಸುರಕ್ಷಿತವಾಗಿ ಕಡಲಿಗೆ ಬಿಡುವಂತೆ ಸೂಚಿಸಿದರು.

ಈ ಅಪರೂಪದ ಆಮೆಗಳ ಮೊಟ್ಟೆ ನಾಯಿ ಮತ್ತು ಪಕ್ಷಿಗಳ ಪಾಲಾಗದಂತೆ ಸುತ್ತಲೂ ಕಟ್ಟೆ ಕಟ್ಟಿ ಸಂರಕ್ಷಿಸಿರುವ ಅರಣ್ಯ ಸಿಬ್ಬಂದಿಯ ಕಾಳಜಿ ಮತ್ತು ತಣ್ಣೀರು ಬಾವಿ ಕಡಲ ತೀರವನ್ನು ಅತ್ಯಂತ ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಅವರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್, ಕೆ.ಎಸ್.ಡಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಕಮಲಾ ಕರಿಕಾಳನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು