10:29 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪದ್ಮನಾಭ ನರಿಂಗಾನ ನಿಧನ: ಸ್ಪೀಕರ್ ಖಾದರ್ ಸಹಿತ ಹಲವು ಗಣ್ಯರ ಸಂತಾಪ

07/02/2024, 18:56

ಮಂಗಳೂರು(reporterkarnataka.com): ಹಿರಿಯ ಕಾಂಗ್ರೆಸ್ ಮುಖಂಡ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪದ್ಮನಾಭ ನರಿಂಗಾನ ಅವರು ಬುಧವಾರ ನಿಧನರಾಗಿದ್ದು, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಪದ್ಮನಾಭ ನರಿಂಗಾನ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಧಾರ್ಮಿಕ-ಸಾಮಾಜಿಕ ರಂಗಗಳಲ್ಲಿ ಸಕ್ರೀಯರಾಗಿದ್ದು, ಅಹಿಂದ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದರು. ಅಪರಿಮಿತ ಶ್ರಮ, ಬದ್ಧತೆಯಿಂದ ರಾಜಕೀಯ ಕ್ಷೇತ್ರದಲ್ಲಿ ಮೇಲೆ ಬಂದವರು. ಪ್ರಾಮಾಣಿಕ ರಾಜಕಾರಣಿಯಾಗಿ ಪಕ್ಷದಲ್ಲಿ ಗುರುತಿಸಿಕೊಂಡು ಎಲ್ಲರ ಪ್ರೀತಿ ಪಾತ್ರರಾಗಿದ್ದರು. ಅವರ ನಿಧನ ನನಗೆ ಹಾಗೂ ನನ್ನ ನನ್ನ ಕ್ಷೇತ್ರದ ಕಾರ್ಯಕರ್ತರಿಗೂ,ಸಾರ್ವಜನಿಕರಿಗೂ ಆಘಾತ ಉಂಟುಮಾಡಿದ್ದು, ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ-ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಖಾದರ್ ಹೇಳಿದ್ದಾರೆ.
ಪದ್ಮನಾಭ ನರಿಂಗಾನ ಅವರು 20 ಅಂಶದ ಕಾರ್ಯಕ್ರಮದ ಸದಸ್ಯರಾಗಿ, ಜಿಲ್ಲಾ ಕಾಂಗ್ರೆಸ್ ಎಸ್ಸಿ-ಎಸ್ಟಿ ಅಧ್ಯಕ್ಷರಾಗಿ, ಅಹಿಂದ ಜಿಲ್ಲಾಧ್ಯಕ್ಷರಾಗಿ, ನರಿಂಗಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ಕೈರಂಗಳ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ, ಸ್ಥಳೀಯ ದೇವಸ್ಥಾನ, ದೈವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ, ನರಿಂಗಾನ ಕಂಬಳ ಸಮಿತಿ ಗೌರವ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಸಾಮಾಜಿಕ ಕ್ಷೇತ್ರದ ಸೇವೆಗಾಗಿ ಈ ಬಾರಿಯ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಅಂತಿಮ ದರ್ಶನ: ಫೆ 8ರಂದು ಬೆಳಿಗ್ಗೆ 10 ಗಂಟೆಗೆ ನರಿಂಗಾನದ ಸ್ವಗೃಹದಲ್ಲಿ ಸಾರ್ವಜನಿಕ ದರ್ಶದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು