10:28 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಉಡುಪಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಾಹೆಯಿಂದ 5 ಲಕ್ಷ ರೂ. ದೇಣಿಗೆ ಹಸ್ತಾಂತರ

08/02/2024, 10:12

ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್(ಮಾಹೆ) ವತಿಯಿಂದ 5 ಲಕ್ಷ ರೂ. ದೇಣಿಗೆ ಹಸ್ತಾಂತರಿಸಲಾಯಿತು.
ಮಣಿಪಾಲ ಮಾಹೆಯ ಎಜ್ಯು ಬಿಲ್ಡಿಂಗ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗೂ ಉಪ ಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್ ಅವರು ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ 5 ಲಕ್ಷ ರೂ. ಮೊತ್ತದ ಚೆಕ್‌ನ್ನು ಹಸ್ತಾಂತರಿಸಿದರು. ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಉಪಕುಲಪತಿ ಡಾ.ಶರತ್ ರಾವ್ ಹಾಜರಿದ್ದರು.
ಈ ಸಂದರ್ಭದಲ್ಲಿ ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗೂ ಉಪ ಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ರಾಜ್ಯ ಸಂಘದ ಸದಸ್ಯ ಕಿರಣ್ ಮಂಜನಬೈಲು, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಉಡುಪಿ ಪತ್ರಿಕಾ ಭವನ ಸಂಚಾಲಕ ಅಜಿತ್ ಅರಾಡಿ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು