ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಡೆಂಗ್ಯುಗೆ ಮೊದಲ ಬಲಿ; ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ದಾರುಣ ಸಾವು
08/02/2024, 13:30
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಚಿಕ್ಕಮಗಳೂರು ನಗರದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ನಿಯನ್ನು ಸಹನಾ ಬಾನು (18) ಎಂದು ಗುರುತಿಸಲಾಗಿದೆ. ಈಕೆ ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿಯಾಗಿದ್ದಾಳೆ.
ಜ್ವರದಿಂದ ಬಳಲುತ್ತಿದ್ದ ಸಹರಾ ಬಾನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.
ಚಿಕ್ಕಮಗಳೂರು ನಗರದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣದಿಂದ ನಾಗರಿಕರು ಆತಂಕಕ್ಕೀಡಾಗಿದ್ದಾರೆ.