10:29 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಶಾಸಕ ಡಾ.ಭರತ್ ಶೆಟ್ಟಿ ಲೇವಡಿ

08/02/2024, 18:17

ಸುರತ್ಕಲ್(reporterkarnataka.com): ಕಾಂಗ್ರೆಸ್ ಮುಳುಗು ತ್ತಿರುವ ಹಡಗು ಎಂಬುದು ಪಕ್ಷದ ನಾಯಕರಿಗೆ ಅರಿವಾಗಿದ್ದು, ಭವಿಷ್ಯ ಕಂಡುಕೊಳ್ಳಲು ನಮ್ಮ ಜಿಲ್ಲೆಯ ಮಾದರಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ವಿರುದ್ದ ಮುತ್ತಿಗೆಯಂತಹ ಕಾರಣವಿಲ್ಲದ ಹೋರಾಟಕ್ಕೆ ಇಳಿದಿದ್ದಾರೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ.
ಕಾವೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,ಸಂಸದ ನಳಿನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ಪಕ್ಷದ ಯುವ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪ್ರಚಾರ ಸ್ಟಂಟ್ ಎಂದು ಬಣ್ಣಿಸಿರುವ ಶಾಸಕರು, ಕಾಂಗ್ರೆಸ್ ಹಣ ,ಹೆಂಡ ಬಳಸಿ ಚುನಾವಣೆ ಗೆಲ್ಲುತ್ತಿದ್ದ ಕಾಲವೊಂದಿತ್ತು. ಬಿಜೆಪಿಯ ಆಡಳಿತದ ಬಳಿಕ ಮತದಾರ ಜಾಗೃತನಾಗಿ ಕಾಂಗ್ರೆಸ್‍ನ ಹೆಂಡ ರಾಜಕೀಯ ಅರಿತು ಬಿಜೆಪಿಯನ್ನು ಸತತವಾಗಿ ಆಯ್ಕೆ ಮಾಡುತ್ತಿದ್ದಾರೆ. ಇದರಿಂದ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಭ್ರಮ ನಿರಸನಗೊಂಡು ಹೋರಾಟಕ್ಕೆ ಇಳಿದಂತಿದೆ.
ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಸೇರಿದಂತೆ ,ವಿವಿಧ ಇಲಾಖೆಯ ಮೂಲಕ ,ಸಾವಿರಾರು ಕೋ.ರೂ ಅನುದಾನ ತಂದು ಸದ್ಬಳಕೆ ಮಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ರೈಲ್ವೆ,ಹೆದ್ದಾರಿ,ಕೋಸ್ಟ್ ಗಾರ್ಡ್ ಟ್ರೈನಿಂಗ್ ಸೆಂಟರ್,ಪ್ಲಾಸ್ಟಿಕ್ ಪಾರ್ಕ್ ಸಹಿತ ಹತ್ತು ಹಲವು ಅಭಿವೃದ್ಧಿ ಕಾರ್ಯಗಳು ಕಣ್ಣಮುಂದಿವೆ.
ಕಾಂಗ್ರೆಸ್ ಕಾರ್ಯಕರ್ತರು , ನಾಯಕರು ಈ ಎಲ್ಲಾ ಮಾಹಿತಿ ಪಡೆದುಕೊಂಡು ತನ್ನ ಜ್ನಾನ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು