11:24 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ತುಂಬೆಯಿಂದ ನೀರು ಸರಬರಾಜು ಮಾಡುವ ಪ್ರಮುಖ ಪೈಪ್ ಲೈನಿನಲ್ಲಿ ತೊಂದರೆ: 4 ದಿನಗಳಿಂದ ಮಂಗಳೂರಿಗೆ ನೀರಿಲ್ಲ!; ಖಾಸಗಿ ಟ್ಯಾಂಕರ್ ಗಳಿಗೆ ಭಾರೀ ಡಿಮಾಂಡ್

09/02/2024, 18:43

ಮಂಗಳೂರು(reporterkarnataka.com): ತುಂಬೆ ಅಣೆಕಟ್ಟಿನಿಂದ ಬೆಂದೂರುವೆಲ್
ಪಂಪ್‌ಹೌಸ್‌ಗೆ ನೀರು ಸರಬರಾಜು ಮಾಡುವ ಪ್ರಮುಖ ಪೈಪ್ ಲೈನ್ ನಲ್ಲಿ ಸಮಸ್ಯೆ ಉಂಟಾಗಿರುವುದರಿಂದ ಕಳೆದ 4 ದಿನಗಳಿಂದ ನಗರಕ್ಕೆ ನೀರು ಸರಬರಾಜು ತೊಂದರೆ ಉಂಟಾಗಿದೆ.
ನಗರಕ್ಕೆ ನೀರು ಸರಬರಾಜು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಕಡಲನಗರಿಯಲ್ಲಿ ಸತತ 4 ದಿನಗಳಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ವಿವಿಧೆಡೆ ನಾಗರಿಕರು ನೀರಿಲ್ಲದೆ ತೊಂದರೆಗೀಡಾಗಿದ್ದಾರೆ. ನಗರದ ಕೊಡಿಯಾಲಬೈಲು, ಕದ್ರಿ, ಪಿವಿಎಸ್, ಬಂದರು, ಲೇಡಿಹಿಲ್, ಕೋಡಿಕಲ್, ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ನಾಗುರಿ, ಜಲ್ಲಿಗುಡ್ಡೆ, ಕೂಳೂರು, ಪಣಂಬೂರು, ಸುರತ್ಕಲ್, ಕಾಟಿಪಳ್ಳ, ಕಾನ, ಕುಳಾಯಿ, ಮುಕ್ಕ ಸೇರಿದಂತೆ ಹಲವು ಪ್ರದೇಶಗಳ ನಿವಾಸಿಗಳು ನೀರಿಲ್ಲದೆ ತೊಂದರೆಗೀಡಾಗಿದ್ದಾರೆ. ಖಾಸಗಿ ನೀರಿನ ಟ್ಯಾಂಕರ್ ಗಳ ಓಡಾಟ ಜೋರಾಗಿ ನಡೆಯುತ್ತಿದೆ.
ತುಂಬೆಯಲ್ಲಿ ನೇತ್ರಾವತಿ ನದಿಗೆ ಕಟ್ಟಿದ ಅಣೆಕಟ್ಟಿನಿಂದ ಬೆಂದೂರ್‌ವೆಲ್ ಪಂಪ್‌ಹೌಸ್‌ಗೆ ನೀರನ್ನು ಸಾಗಿಸುವ1 ಮೀಟರ್ ವ್ಯಾಸದ ಪೈಪ್‌ಲೈನ್‌ನಲ್ಲಿ ಸಮಸ್ಯೆ ಉಂಟಾಗಿದೆ. ನಗರದ ನಗರೋಡಿ ಬಳಿ ಪೈಪ್‌ಲೈನ್‌ಗೆ ಹಾನಿಗೀಡಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು