11:04 AM Friday29 - November 2024
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು: ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ… ಲಂಡನ್ ವಾಲ್ವ್ಸ್ 2024 ರಲ್ಲಿ ಮಿಂಚಿದ ಭಾರತ: ಹೃದಯ ಕವಾಟ ಆವಿಷ್ಕಾರ ‘ಮೈವಾಲ್… ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್ ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ…

ಇತ್ತೀಚಿನ ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಚಳ್ಳಕೆರೆ ಬಂದ್ : ಮುಚ್ಚಿದ ಅಂಗಡಿ- ಮುಂಗಟ್ಟು; ರಸ್ತೆಗಿಳಿಯದ ವಾಹನ

09/02/2024, 21:18

ಮುರುಡೇಗೌಡ ಚಳ್ಳಕರೆ ಚಿತ್ರದುರ್ಗ

info.reporterkarnataka@gmail.com

ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಶುಕ್ರವಾರ ಕರೆ ನೀಡಿದ ಬಂದ್ ಗೆ ಚಳ್ಳಕೆರೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿಗಳು- ಮುಂಗಟ್ಟು ಬಾಗಿಲು ಮುಚ್ಚಿದ್ದು, ಜನಸಂಚಾರ ವಿರಳವಾಗಿತ್ತು. ನಗರದಲ್ಲಿ ಹೂವು, ಹಣ್ಣು, ಸೊಪ್ಪು, ತರಕಾರಿ ಮಾರಾಟ ಹೊರತುಪಡಿಸಿ ಎಲ್ಲ ಅಂಗಡಿಗಳು ಬಾಗಿಲು ಮುಚ್ಚಿತ್ತು. ಬಸ್, ಆಟೊ ಸಂಚಾರ ಸ್ಥಗಿತಗೊಂಡಿತ್ತು. ಬೈಕ್, ಕಾರು ಹಾಗೂ ಸರಕು ಸಾಗಣೆ ವಾಹನ ಸಂಚಾರಕ್ಕೂ ಪ್ರತಿಭಟನಕಾರರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.
*ನೆಹರೂ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು;*
ನಗರದ ನೆಹರೂ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವಿಳಂಬಕ್ಕೆ ಕಿಡಿಕಾರಿದರು. ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ₹ 5,300 ಕೋಟಿ ಅನುದಾನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ, ಕನ್ನಡಪರ ಸಂಘಟನೆ, ಕಾರ್ಮಿಕ, ಹೋಟೆಲ್ ಮಾಲೀಕರು, ಆಟೊ, ಖಾಸಗಿ ಬಸ್, ಲಾರಿ ಮಾಲಿಕರ, ಹಾಗೂ ಚಾಲಕರ ಸಂಘಟನೆಗಳು ಬಂದ್‌ಗೆ ಸಾಥ್ ನೀಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು