5:34 PM Sunday20 - July 2025
ಬ್ರೇಕಿಂಗ್ ನ್ಯೂಸ್
SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ…

ಇತ್ತೀಚಿನ ಸುದ್ದಿ

ತಾಲೂಕು ಅಧ್ಯಕ್ಷರ ನೇಮಕ‌ ವಿಚಾರ: ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ; ತಾಪಂ ಮಾಜಿ ಅಧ್ಯಕ್ಷರ ಮೇಲೆ ಹಲ್ಲೆ

09/02/2024, 21:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ
ಭುಗಿಲೆದ್ದಿದೆ. ತಾಲೂಕಿನ ವಿವಿಧ ಮಂಡಲ, ಮೋರ್ಚಾ ಅಧ್ಯಕ್ಷರ ನೇಮಕ ವಿಚಾರದಲ್ಲಿ ಅಸಮಾಧಾನ ತಾರಕ್ಕೇರಿದೆ.
ಮೂಡಿಗೆರೆ ತಾಲೂಕು ಅಧ್ಯಕ್ಷರ ನೇಮಕ ವಿಚಾರದಲ್ಲಿ ಬಿಜೆಪಿ ಜಗಳ ಇದೀಗ ಬೀದಿಗೆ ಬಂದಿದೆ.
ತಾಲೂಕು ಅಧ್ಯಕ್ಷರ ಕಣದಲ್ಲಿ 12 ಜನ ಆಕಾಂಕ್ಷಿಗಳಿದ್ದರು.
ನೂತನ ಅಧ್ಯಕ್ಷರ ಹೆಸರು ಘೋಷಣೆ ಆಗುತ್ತಿದ್ದಂತೆ ಅಸಮಾಧಾನ ಸ್ಫೋಟಗೊಂಡಿದೆ.


ಮೂಡಿಗೆರೆ ತಾಲೂಕಿನ ಬಿಜೆಪಿ ಅಧ್ಯಕ್ಷರಾಗಿ ಟಿ.ಎಂ.ಗಜೇಂದ್ರ ಆಯ್ಕೆಗೊಂಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಅವರು ನೇಮಕದ ಆದೇಶ ಹೊರಡಿಸಿದ್ದಾರೆ.
ಈ ನಡುವೆ ತಾಲೂಕು ಪಂಚಾಯಿತಿ‌ ಮಾಜಿ ಅಧ್ಯಕ್ಷ ಕೆ.ಸಿ.ರತನ್ ಮೇಲೆ ಹಲ್ಲೆ ನಡೆಸಲಾಗಿದೆ. ಕೆ.ಸಿ.ರತನ್ ಹಸ್ತ ಕ್ಷೇಪದಿಂದ ಅಧ್ಯಕ್ಷ ಸ್ಥಾನ ಕೈತಪ್ಪಿದೆ ಎಂದು ಹಲ್ಲೆ ನಡೆದಿದೆ.
ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಪುಟ್ಟಣ್ಣ ಹಾಗೂ ಮತ್ತೋರ್ವ ಆಕಾಂಕ್ಷಿ ಭರತ್ ರಿಂದ ಹಲ್ಲೆ ಆರೋಪ.
ತೀವ್ರ ಹಲ್ಲೆಗೆ ಒಳಗಾಗಿರುವ ಕೆ.ಸಿ. ರತನ್ ಅವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು