10:30 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಹಿಂದೂ ಭಾವನೆಗಳಿಗೆ ಧಕ್ಕೆ; ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ

11/02/2024, 20:26

ಮಂಗಳೂರು(reporterkarnataka.com): ಕ್ರಿಶ್ಚಿಯನ್ ಮಿಷಿನರಿ ಶಾಲೆಗಳಲ್ಲಿ ಹಿಂದೂ ವಿರೋಧಿ ಭಾವನೆ ವ್ಯಕ್ತವಾಗುತ್ತಿರುವುದು ಇದೇ ಮೊದಲೇನಲ್ಲ.
ಹಿಂದೂ ಸಾಂಪ್ರದಾಯಿಕ ಹೂ ಮುಡಿಯಲು, ಬಳೆ ಹಾಕಲು, ತಿಲಕ ಹಾಕಲು ಹೀಗೆ ಹಲವು ಆಚಾರಗಳನ್ನು ನಮ್ಮ ಹೆಣ್ಮಕಳ್ಳಿಂದ ದೂರ ಮಾಡಿದ ಕ್ರಿಶ್ಚಿಯನ್ ಮಿಷನರಿಗಳು ಇದೀಗ ರಾಮ ಮಂದಿರದ ವಿರುದ್ದದ ದ್ವೇಷ ಭಾವನೆ ಪಸರಿಸಲು ಹೂಡುತ್ತಿರುವ ಷಡ್ಯಂತ್ರ ಸಹಿಸಲು ಅಸಾಧ್ಯ.
ಸಂಬಂಧಪಟ್ಟ ಶಾಲೆಯ ಶಿಕ್ಷಕಿ ವಿರುದ್ದ ಆಡಳಿತ ಮಂಡಳಿ ಕ್ರಮ ಜರುಗಿಸ ಇಲ್ಲದಿದ್ದಲ್ಲಿ ತೀವ್ರ ಹೋರಾಟ ಅನಿವಾರ್ಯ ಎಂದು ಡಾ.ಭರತ್ ಶೆಟ್ಟಿ ವೈ.ಎಚ್ಚರಿಸಿದ್ದಾರೆ.
ನಗರದ ಖಾಸಗಿ ಶಾಲೆಯ ಶಿಕ್ಷಕಿ ಶ್ರೀರಾಮ ಹಾಗೂ ಮಂದಿರದ ವಿರುದ್ದ ವಿದ್ಯಾರ್ಥಿಗಳ ಮುಂದೆ ಆಡಿದರು ಎನ್ನಲಾದ ಹಿಂದೂ ಭಾವನೆಗೆ ಧಕ್ಕೆ ತರುವ ಮಾತುಗಳನ್ನು ಶಾಸಕರು‌ ಖಂಡಿಸಿದ್ದಾರೆ.
ಇಂತಹ ಹಿಂದೂ ವಿರೋಧಿ ಶಾಲೆಗಳನ್ನು ತ್ಯಜಿಸಿ ,ನಮ್ಮ ಸಂಪ್ರದಾಯಕ್ಕೆ ಮನ್ನಣೆ ನೀಡುವ ಶಾಲಾ, ಕಾಲೇಜುಗಳಿಗೆ ಸೇರಿ ವಿದ್ಯಾಭ್ಯಾಸ ಮಾಡುವ ಬಗ್ಗೆ ಒಮ್ಮತದ ಅಭಿಪ್ರಾಯ ಮೂಡಬೇಕಿದೆ.ಈ ಬಗ್ಗೆ ಪೋಷಕರು ಚಿಂತಿಸಲು ಇದು ಸಕಾಲ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಕೃಷ್ಣಾಪುರ ಶಾಲೆಯಲ್ಲಿ ರಕ್ಷಾ ಬಂಧನ ಕಿತ್ತು ಎಸೆಯಲಾಯಿತು.ಇದೀಗ ರಾಮನ ಕುರಿತಂತೆ ನಿಂದನೆ ಸಹಿಸಲು ಅಸಾಧ್ಯ.ಇದೇ ಬಗ್ಗೆ ಜೀಸಸ್ ಹಾಗೂ ಅವರ ಮೂರ್ತಿ ಪೂಜೆಯ ಬಗ್ಗೆ ಮಾತನಾಡಿದರೆ ಇಷ್ಟರವರೆಗೆ ಡೋಂಗಿ ಜಾತ್ಯತೀತ ಹೋರಾಟಗಾರರು ಬೀದಿಗೆ ಬರುತ್ತಿದ್ದರು. ಕಾಂಗ್ರೆಸ್ ಪಕ್ಷದ ನಾಯಕರೂ ಕೂಡ ಮೌನ ವಹಿಸಿದ್ದು, ಹಿಂದೂ ವಿರೋಧಿ ಭಾವನೆಯನ್ನು ತೋರಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು