12:07 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಅಯೋಧ್ಯೆ ಬಾಲರಾಮನಿಗೆ 70 ಲಕ್ಷ ರೂ. ಮೌಲ್ಯದ ಸ್ವರ್ಣ ಪೀಠ ಪ್ರಭಾವಳಿ ಸಮರ್ಪಣೆ: ಕಾಶಿಮಠ ಸಂಸ್ಥಾನದಿಂದ ಕೊಡುಗೆ

12/02/2024, 21:51

ಮಂಗಳೂರು(reporterkarnataka.com): ಕಾಶಿಮಠ ಸಂಸ್ಥಾನದ ವತಿಯಿಂದ ಅಯೋಧ್ಯೆಯ ಬಾಲರಾಮನಿಗೆ 70 ಲಕ್ಷ ರೂಪಾಯಿ ಮೌಲ್ಯದ ಸ್ವರ್ಣ ಪೀಠ ಪ್ರಭಾವಳಿಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಬಾಲರಾಮನ ಉತ್ಸವ ಮೂರ್ತಿಗೆ ಸಮರ್ಪಿಸಲಾಯಿತು.

ಈ ಸ್ವರ್ಣ ಪೀಠ ಪ್ರಭಾವಳಿಗೆ ಕೋಟದ ಕಾಶಿಮಠದಲ್ಲಿ ಅದ್ದೂರಿ ಮೆರವಣಿಗೆ ಹಾಗೂ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ಸ ಯಮೀಂದ್ರತೀರ್ಥ ಸ್ವಾಮೀಜಿಯವರು ತಮ್ಮ ಅಮೃತ ಹಸ್ತದಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರಿಗೆ ಹಸ್ತಾಂತರಿಸುವ ಮೂಲಕ ಅಯೋಧ್ಯೆಗೆ ಕಳುಹಿಸಲಾಗಿತ್ತು. ಮೊನ್ನೆಯಷ್ಟೇ ಕಾಶಿಮಠ ಸಂಸ್ಥಾನದ ವತಿಯಿಂದ ಅಯೋಧ್ಯೆಯ ಬಾಲರಾಮನಿಗೆ ಬೆಳ್ಳಿಯ ಪಲ್ಲಕ್ಕಿಯೂ ಸಮರ್ಪಣೆಯಾಗಿದ್ದು ಇಲ್ಲಿ ಗಮನಾರ್ಹ.
ಇದು ನನ್ನ ಜೀವನದ ಪರಮ ಪವಿತ್ರ ಭಾಗ್ಯವಾಗಿದ್ದು ಪರಮಪೂಜ್ಯ ಗುರುಗಳ ಹಾಗೂ ಪ್ರಭು ಶ್ರೀರಾಮನ ಸೇವಾ ಕಾರ್ಯಕ್ಕಿಂತ ಮಿಗಿಲಾದುದು ಬೇರಾವುದೂ ಇಲ್ಲವೆಂದು ಶಾಸಕರು ಇದೇ ವೇಳೆ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು