7:38 AM Saturday11 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ…

ಇತ್ತೀಚಿನ ಸುದ್ದಿ

ಸಿಎಂ ತವರು ಕ್ಷೇತ್ರದ ರೈತರಿಗೆ ಸಿಗದ ನ್ಯಾಯ: ಖಾಯಂ ಉದ್ಯೋಗ ಸೇರಿದಂತೆ ವಿವಿಧ ಬೇಡಿಕೆ ಈಡೇರಿಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ

14/02/2024, 21:18

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆಗೆ ಭೂಮಿ ನೀಡಿ ವಂಚನೆಗೊಳಗಾದ ಸುಮಾರು 150ಕ್ಕೂ ಹೆಚ್ಚು ರೈತ ಕುಟುಂಬಗಳು ತಮ್ಮ ಹಕ್ಕೊತ್ತಾಯಕ್ಕಾಗಿ ಕಾರ್ಖಾನೆ ಮುಂಭಾಗ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ.
ಕೆಐಎಡಿಬಿ ಗೆ ಭೂಮಿ ನೀಡಿದ ರೈತರ ಹಕ್ಕುಗಳ ಹೋರಾಟ ಸಮಿತಿ ಹಾಗೂ ಜನಾಂದೋಲನಗಳ ಮಹಾ ಮೈತ್ರಿ ರಾಜ್ಯ ರೈತ ಸಂಘ, ಮತ್ತು ಅಖಿಲ ಭಾರತ ಕೃಷಿ ಕಾರ್ಮಿಕ ಸಂಘಟನೆ ಸಹಯೋಗದೊಂದಿಗೆ ನಡೆಯುತ್ತಿರುವ ಪ್ರತಿಭಟನಾ ಧರಣಿ ಕಳೆದ ಆರು ದಿನಗಳಿಂದ ಕಾರ್ಖಾನೆ ಮುಂಭಾಗ ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ. ಕಾರ್ಖಾನೆ ಮುಂಭಾಗವೇ ತಮ್ಮ ಜಾನುವಾರುಗಳನ್ನು ಕಟ್ಟಿ ಎತ್ತಿನ ಗಾಡಿಗಳನ್ನು ನಿಲ್ಲಿಸಿ, ಅಲ್ಲಿಯೇ ಅಡುಗೆ ಮಾಡಿ ಊಟ, ತಿಂಡಿ ಮಾಡುತ್ತ ಅಹೋರಾತ್ರಿ ಕಷ್ಟದ ಪ್ರತಿಭಟನಾ ಧರಣಿ ಹಾಗೂ ಜೀವನ ರೈತ ಕುಟುಂಬದವರು ನಡೆಸುತ್ತಿದ್ದಾರೆ.
ತಮ್ಮ ಮಕ್ಕಳಿಗೆ ಖಾಯಂ ಉದ್ಯೋಗ ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಕಾರ್ಖಾನೆ ಮತ್ತು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಕಾರ್ಖಾನೆಯ ಮುಖ್ಯ ದ್ವಾರಗಳಲ್ಲೆ ಕುಳಿತ ಪ್ರತಿಭಟನಾಕಾರರು ಕಾರ್ಖಾನೆಗೆ ಯಾವುದೇ ವಾಹನಗಳು, ಸಿಬ್ಬಂದಿಗಳು ನೌಕರರು ಹೋಗದಂತೆ ದಿಗ್ಬಂಧನ ವಿಧಿಸಿ ಕಾರ್ಖಾನೆಯ ಕಾರ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದ್ದಾರೆ.
ಬಳಿಕ ರೈತ ಸಂಘಟಕರು ಹಾಗೂ ಸಂತ್ರಸ್ತ ರೈತರು ಮತ್ತು ಮಹಿಳೆಯರು ಮಾತನಾಡಿ, ನಮ್ಮ ಮಕ್ಕಳಿಗೆ ಉದ್ಯೋಗ ಸಿಗುತ್ತದೆ ಎಂಬ ಖುಷಿ ಹಾಗೂ ಭರವಸೆಯಿಂದ ನಮ್ಮ ಕೃಷಿ ಭೂಮಿಯನ್ನು ಸಕ್ಕರೆ ಕಾರ್ಖಾನೆಗೆ ಬಹಳ ಕಡಿಮೆ ಬೆಲೆಯಲ್ಲಿ ಭೂಮಿ ನೀಡಿ ಸುಮಾರು ವರ್ಷಗಳೆ ಕಳೆದರೂ ನಮ್ಮ ಮಕ್ಕಳಿಗೆ ಖಾಯಂ ಉದ್ಯೋಗ ನೀಡದೆ ವಂಚಿಸುತ್ತಾ ಬಂದಿದ್ದಾರೆ ಎಂದು ಆರೋಪಿಸಿದರು.
ಇದು ಸಿಎಂ ಪ್ರತಿನಿಧಿಸುತ್ತಿರುವ ಕ್ಷೇತ್ರ ಆದರೂ ಇಲ್ಲಿ ಅವರಿಗೆ ಮತ ನೀಡಿದ ಮತದಾರರು ಮತ್ತು ಭೂಮಿ ಕಳೆದುಕೊಂಡ ರೈತರು ಕಳೆದ ಆರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಯಾವೊಬ್ಬ ಅಧಿಕಾರಿಗಳಾಗಲಿ ಕಾರ್ಖಾನೆ ಯವರಾಗಲಿ ಕ್ಯಾರೇ ಎನ್ನದೆ ಒಬ್ಬ ಮುಖ್ಯಮಂತ್ರಿಗೆ ಅವಮಾನವಾಗುವಂತಹ ಘಟನೆಗೆ ಕಾರಣರಾಗಿದ್ದಾರೆ ಎಂದರು.
ಇಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆಯಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹಾಗಾಗಿ ಇದಕ್ಕೆ ಸಿಎಂ ಆದಿಯಾಗಿ ಕೂಡಲೇ ಸಂಬಂಧಪಟ್ಟವರು ಇದರ ಬಗ್ಗೆ ಜಾಗೃತರಾಗಿ ನಮ್ಮ ಹಕ್ಕೊತ್ತಾಯಗಳನ್ನು ಬಗೆಹರಿಸದಿದ್ದರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ನಾವು ನೀಡಿರುವ ಜಮೀನನ್ನು ವಶಪಡಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಬೊಕ್ಕಳ್ಳಿ ನಂಜುಂಡಸ್ವಾಮಿ, ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ಜಿಲ್ಲಾಸಂಚಾಲಕ ಬಸವರಾಜು, ಸಂತ್ರಸ್ತ ರೈತರುಗಳಾದ ಪುನೀತ್, ರಾಜು, ಮಹೇಶ್, ಮಹದೇವಮ್ಮ, ಲಕ್ಷ್ಮಮ್ಮ, ಸುಶೀಲ, ಸೇರಿದಂತೆ ನೂರಾರು ಮಂದಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು