7:41 PM Friday10 - January 2025
ಬ್ರೇಕಿಂಗ್ ನ್ಯೂಸ್
ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2…

ಇತ್ತೀಚಿನ ಸುದ್ದಿ

ಬದುಕಿನ ಯಾನ ಮುಗಿಸಿದ ಮಲಯಾಳಂ ನಟಿ ಶರಣ್ಯ: ಬ್ರೈನ್ ಟ್ಯೂಮರ್ ಗೆ 11 ಬಾರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕಲಾವಿದೆ !!

10/08/2021, 08:57

ತಿರುವನಂತಪುರ(reporterkarnataka.com)  ಮಲಯಾಳಂ ಕಿರುತೆರೆಯಲ್ಲಿ ಬಲು ದೊಡ್ಡ ಹೆಸರು ಮಾಡಿದ್ದ ಮಲಯಾಳಂ ನಟಿ ಶರಣ್ಯ ಶಶಿ ಅವರು ಕ್ಯಾನ್ಸರ್ ಎಂಬ ಮಹಾ ಮಾರಿಗೆ ಬಲಿಯಾಗಿದ್ದಾರೆ. ಕಳೆದ 10 ವರ್ಷಗಳಿಂದ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ನಿಧನರಾಗಿದ್ದಾರೆ.

35  ವರ್ಷ ವಯಸ್ಸಿನ ಮುದ್ದು ಮುಖದ ನಟಿ ಕಳೆದ 10 ವರ್ಷದಿಂದ ಬ್ರೈನ್ ಟ್ಯೂಮರ್ ವಿರುದ್ಧ ಹೋರಾಡುತ್ತಲೇ ಬಂದಿದ್ದರು. ಅವರಿಗೆ ಒಟ್ಟು 11 ಬಾರಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಕೊರೋನಾ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುಣಮುಖರಾದ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ನಂತರ ಇದ್ದಕ್ಕಿದ್ದ ಹಾಗೆ ಅವರ ದೇಹದಲ್ಲಿ ಸೋಡಿಯಂ ಲೆವಲ್ ಏರುಪೇರಾಯಿತು.

ಮತ್ತೆ ಅವರನ್ನು ತಿರುವನಂತಪುರ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಬದುಕಿನ ಯಾನವನ್ನು ಮುಗಿಸಿದ್ದಾರೆ.

2012ರಲ್ಲಿ ನಟಿಗೆ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಇದೇ ಕಾರಣಕ್ಕೆ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು