11:24 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ಧಿ ಸಂಭ್ರಮ: 22ರಂದು ಶ್ರೀ ವಿದ್ಯಾಗಣಪತಿ ದೇವರ ಪ್ರಾಣ ಪ್ರತಿಷ್ಠೆ; ಮಾತೃ ಸಂಗಮ

14/02/2024, 21:35

ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ಧಿ ಸಂಭ್ರಮ ಪ್ರಯುಕ್ತ ಶ್ರೀ ವಿದ್ಯಾಗಣಪತಿ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಫೆ.22ರಂದು ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಳಿಸಿದರು.


ಬುಧವಾರ ಶ್ರೀರಾಮ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಾಬ್ದಿ ಸಂಭ್ರಮ ಫೆ.21ರಿಂದ ಫೆ.24 ರವರೆಗೆ ಮಂದಿರದಲ್ಲಿ ನಡೆಯಲಿದೆ. ಶತಾಬ್ದಿ ಕಾರ್ಯಕ್ರಮದಲ್ಲಿ ನೂತನವಾಗಿ ಶ್ರೀ ವಿದ್ಯಾಗಣಪತಿ ದೇವರ ಪ್ರತಿಷ್ಠೆ, ಮಂದಿರದ ಮೇಲ್ಚಾವಣಿಯ ಉದ್ಘಾಟನೆ ಹಾಗೂ ಮಾತೃ ಸಂಗಮ‌ ಕಾರ್ಯಕ್ರಮ ನಡೆಯಲಿದೆ ಎಂದರು.
ಫೆ.21ರಂದು ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯ ನೇತ್ರಾವತಿ ನದಿಯಲ್ಲಿ ಗಂಗಾಪೂಜೆ ನೆರವೇರಿಸಿ ತೀರ್ಥ ಕಲಶಗಳನ್ನು ಮಂದಿರಕ್ಕೆ ತರಲಾಗುತ್ತದೆ. ಶ್ರೀ ರಾಮ ವಿದ್ಯಾ ಕೇಂದ್ರದ ಮಕ್ಕಳಿಂದ ಸರಸ್ವತಿ ಪೂಜೆ ನಡೆಯಲಿದೆ. ಸಂಜೆ 4 ಗಂಟೆಗೆ ಮಂದಿರದ ಸುತ್ತಮುತ್ತಲಿನ ಭಾಗದಿಂದ ಆಗಮಿಸಿದ ಹೊರಕಾಣಿಕೆ ನರಹರಿ ಪರ್ವತ ಧ್ವಾರದಿಂದ ಮಂದಿರದವರೆಗೆ ವೈಭವ ಮೆರವಣಿಗೆ ಮೂಲಕ ಆಗಮನವನ್ನು ಸ್ವಾಗತಿಸಿಲಿದ್ದೇವೆ. ಸಂಜೆ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಡಾ. ಭಟ್ ವಿವರಿಸಿದರು.
ಫೆ. 22ರಂದು ಶ್ರೀ ವಿದ್ಯಾಗಣಪತಿ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀ ರಾಮಾಂಗಣ ಲೋಕಾರ್ಪಣೆ ಕಾರ್ಯಕ್ರಮ, ಫೆ.23ರಂದು ಮಾತೃ ಸಂಗಮ ಹಾಗೂ ಕುಂಕುಮಾರ್ಚನೆ, ಫೆ. 24 ರಂದು 13 ಕೋಟಿ ರಾಮನಾಮ ತಾರಕ ಜಪಯಜ್ಞ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.
ಶತಾಬ್ದಿ ಸಂಭ್ರಮದಲ್ಲಿ ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಹಿರಿಯರ ಪ್ರಕಾರ ಗಣಪತಿಯ ಇರುವಿಕೆಯು ಗೋಚರಕ್ಕೆ ಬಂದ ಹಿನ್ನೆಲೆಯಲ್ಲಿ ,ವಾಸ್ತು ತಜ್ಞರ ಸಲಹೆಯ ಮೇರೆಗೆ, ಪ್ರಶ್ನಾ ಚಿಂತನೆಯ ಪ್ರಕಾರ 6 ಅಡಿ 2 ಇಂಚು ಎತ್ತರದ ಗಣಪತಿ ವಿಗ್ರಹ ಪ್ರತಿಷ್ಟಾಪನೆ ಮಾಡಲಾಗುತ್ತದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ನಾರಾಯಣ ಸೋಮಯಾಜಿ, ಚೆನ್ನಪ್ಪ ಆರ್.ಕೋಟ್ಯಾನ್, ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ್ ಕಲ್ಲಡ್ಕ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು