ಇತ್ತೀಚಿನ ಸುದ್ದಿ
ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಜಯ್ ಮಾಕನ್, ಸೈಯ್ಯದ್ ನಾಸಿರ್ ಹುಸೇನ್, ಜಿ.ಸಿ. ಚಂದ್ರಶೇಖರ್ ಆಯ್ಕೆ
15/02/2024, 09:55
ಬೆಂಗಳೂರು(reporterkarnataka.com): ಕರ್ನಾಟಕದಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಅಜಯ್ ಮಾಕನ್, ಸೈಯ್ಯದ್ ನಾಸಿರ್ ಹುಸೇನ್ ಹಾಗೂ ಜಿ.ಸಿ ಚಂದ್ರಶೇಖರ್ ಅವರು ಆಯ್ಕೆಗೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭ್ಯರ್ಥಿ ಗಳಿಗೆ ಶುಭ ಹಾರೈಸಿದ್ದಾರೆ. ಪಕ್ಷದ ಅಭ್ಯರ್ಥಿ ಗಳ ಗೆಲುವಿಗಾಗಿ ಕರ್ನಾಟಕ ಕಾಂಗ್ರೆಸ್ ಒಂದು ಕುಟುಂಬದಂತೆ ಒಟ್ಟಾಗಿ ಶ್ರಮಿಸಲಿದೆ ಎಂದು ಮುಖ್ಯಮಂತ್ರಿಯವರು ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.