ಇತ್ತೀಚಿನ ಸುದ್ದಿ
ಕಡೂರು: ಆಫ್ ಮರ್ಡರ್ ಕೇಸಿನಲ್ಲಿ ಜೈಲು ಸೇರಿದ್ದ ಆರೋಪಿ ಯುವಕನ ಕತ್ತು ಸೀಳಿ ಭೀಕರ ಕೊಲೆ
17/02/2024, 13:43
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಆಫ್ ಮರ್ಡರ್ ಕೇಸಿನಲ್ಲಿ ಜೈಲು ಸೇರಿ ಬಿಡುಗಡೆಗೊಂಡಿದ್ದ
ತುಮಕೂರು ಮೂಲದ ಯುವಕನೊಬ್ಬನನ್ನು ಕಾಫಿನಾಡ ಕಡೂರಿನಲ್ಲಿ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಲಾಗಿದೆ.
ದರ್ಶನ್ (21) ಮೃತ ದುರ್ದೈವಿ.
ಕಡೂರು ತಾಲೂಕಿನ ಹುಲಿಗೊಂದಿ ಹೊಸೂರು ಬಳಿ ದುಷ್ಕರ್ಮಿಗಳು
ಯುವಕನ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿದ್ದಾರೆ.
ದರ್ಶನ್ ಅವರು ತುಮಕೂರು ಜಿಲ್ಲೆ ಮಧುಗಿರಿ ಮೂಲದವರು.
ಬೆಂಗಳೂರಿನಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದ. ಆಫ್ ಮರ್ಡರ್ ಕೇಸಿನಲ್ಲಿ ಜೈಲು ಸೇರಿದ್ದ.
ಜಾಮೀನು ಸಿಕ್ಕ ಬಳಿಕ ಇಬ್ಬರು ಸ್ನೇಹಿತರ ಜೊತೆ ಕಡೂರಿಗೆ ಬಂದಿದ್ದ ಎನ್ನಲಾಗಿದೆ.
ಕಡೂರಿನ ಮಾಡಾಳು ಗ್ರಾಮದ ತಾತನ ಮನೆಯಲ್ಲಿ ಇದ್ದನು
ವಾರದ ಹಿಂದೆ ಬೆಂಗಳೂರಿಗೆ ವಾಪಸ್ ಹೋಗಿದ್ದ. ನಿನ್ನೆ ರಾತ್ರಿ ಕಾರಿನಲ್ಲಿ ಬಂದ ಸ್ನೇಹಿತರ ಜೊತೆ ಹೋಗಿದ್ದ. ತಾತನಿಗೆ ಫ್ರೆಂಡ್ಸ್ ಬಂದಿದ್ದಾರೆ, ಹೊಲದ ಶೆಡ್ ನಲ್ಲಿ ಮಲಗುತ್ತೇನೆ ಎಂದು ಹೇಳಿ ಹೋಗಿದ್ದ. ದರ್ಶನ್ ಕಾರಿನಲ್ಲಿ ಹೋಗಿದ್ದನ್ನ ದರ್ಶನ್ ತಾತ ಕೂಡ ನೋಡಿದ್ದರು.
ರಾತ್ರಿ ಹೊಲಕ್ಕೆ ಹೋಗಿ ನೋಡಿದಾಗ ಶೆಡ್ ನಲ್ಲಿ ದರ್ಶನ್ ಇರಲಿಲ್ಲ. ಸ್ನೇಹಿತರ ಜೊತೆ ಎಲ್ಲೋ ಹೋಗಿರಬಹುದು ಎಂದು ತಾತ ಮನೆಗೆ ಬಂದಿದ್ದರು.ಬೆಳಗ್ಗೆ ಮಾಡಾಳು ಗ್ರಾಮದ ತುಸು ದೂರದಲ್ಲಿ ದರ್ಶನ್ ಮೃತದೇಹ ಪತ್ತೆಯಾಗಿದೆ. ಯಾವ ವಿಚಾರಕ್ಕೆ, ಯಾರು ಕೊಲೆಗೈದಿದ್ದಾರೆ ಅನ್ನೋದು ನಿಗೂಢವಾಗಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.