10:55 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ದಾಖಲೆ ಬರೆದ ವಾಮಂಜೂರು ಸಂಕು ಪೂಂಜ- ದೇವು ಪೂಂಜ ಜೋಡುಕರೆ ಕಂಬಳ: 23 ಗಂಟೆಯಲ್ಲಿ ಕಂಬಳ ಸಂಪನ್ನ 166 ಜತೆ ಕೋಣಗಳ ಪಾಲ್ಗೊಳ್ಳುವಿಕೆ

18/02/2024, 19:53

ವಾಮಂಜೂರು(reporterkarnataka.com): ಮಂಗಳೂರಿನ ಹೊರವಲಯದ ವಾಮಂಜೂರು ತಿರುವೈಲು ಗುತ್ತು ಅಮೃತೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆದ ಪ್ರತಿಷ್ಠಿತ ಸಂಕು ಪೂಂಜ- ದೇವು ಪೂಂಜ ಜೋಡುಕರೆ ಕಂಬಳವು ಈ ಬಾರಿಯ ಕಂಬಳ ಕೂಟದಲ್ಲಿಯೇ ಅತ್ಯಂತ ಕನಿಷ್ಠ ಸಮಯದಲ್ಲಿ ಮುಗಿದು ದಾಖಲೆ ಬರೆದಿದೆ.


ಶನಿವಾರ ಬೆಳಗ್ಗೆ 9.45 ಸುಮಾರಿಗೆ ಆರಂಭವಾಗಿದ್ದ 166 ಜತೆ ಕೋಣಗಳು ಭಾಗವಹಿಸಿದ್ದ ವಾಮಂಜೂರು ಕಂಬಳದ ಅಂತಿಮ ಹಂತದ ಸ್ಪರ್ಧೆಯು ಭಾನುವಾರ ಬೆಳಗ್ಗೆ 8.50ಕ್ಕೆ ಅಂತ್ಯವಾಗಿದೆ.
ಕಳೆದ ವರ್ಷವು 23 ಗಂಟೆಯೊಳಗೆ ಮುಗಿದಿದ್ದ ವಾಮಂಜೂರು ತಿರುವೈಲುಗುತ್ತು ಕಂಬಳವು ಈ ಬಾರಿಯೂ 23 ಗಂಟೆಯೊಳಗೆ ಸಂಪನ್ನವಾಗಿ ಮಾದರಿಯಾಗಿದೆ. ಕಂಬಳವನ್ನು ಸರಿಯಾದ ಸಮಯದಲ್ಲಿ ಮುಗಿಸಲು ಹೊಸ ಹೊಸ ತಂತ್ರಜ್ಞಾನದ ಮೊರೆ ಹೋಗುತ್ತಿರುವ ಸಂದರ್ಭದಲ್ಲಿ ವಾಮಂಜೂರು ಕಂಬಳವು ಇತರ ಕೂಟಗಳಿಗೆ ಮಾದರಿಯಾಗಿದೆ.
ಕನೆಹಲಗೆ ವಿಭಾಗದಲ್ಲಿ ಆರು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಐದು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 14 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 35 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 23 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 83 ಜೊತೆ ಕೋಣಗಳು ಭಾಗವಹಿಸಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು