9:53 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪಾಂಡೇಶ್ವರ: ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಸಾಮೂಹಿಕ ಸೂರ್ಯ ನಮಸ್ಕಾರ

20/02/2024, 20:02

ಮಂಗಳೂರು(reporterkarnataka.com): ಶ್ರೀ ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಪಾಂಡೇಶ್ವರ ದ. ಕ. ಜಿಪಂ ಪ್ರೌಡ ಶಾಲೆ, ಮಕ್ಕಳಿಗೆ ಸಾಮೂಹಿಕ ಸೂರ್ಯನಮಸ್ಕಾರ ಕಾರ್ಯಕ್ರಮ ನಡೆಸಿದರು.
ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಲತಿಫ್ ವಹಿಸಿದ್ದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಎಸ್ ಡಿಎಂಸಿ ಅಧ್ಯಕ್ಷೆ ಬೃಂದಾ, ಗಾಯತ್ರಿ ಅತಿಥಿಯಾಗಿದ್ದರು. ಉದ್ಯಮಿ ಮುನೀರ್ ಉಪಸ್ಥಿತರಿದ್ದರು.
ಪ್ರತಿಷ್ಠಾನದ ಜತೆ ಕಾರ್ಯದರ್ಶಿ ಪ್ರಭಾ, ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಶಿಕ್ಷಕ ಅಶೋಕ ಪೂಜಾರಿ ಅವರು ಭಾಗವಹಿಸಿದ್ದರು.

ಮುಖ್ಯ ಅತಿಥಿ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಪ್ರಭಾ ಅವರು ಸೂರ್ಯನಮಸ್ಕಾರ ಮತ್ತು ಯೋಗದ ಮಹತ್ವ ಮತ್ತು ರಥಸಪ್ತಮಿಯ ವಿಶೇಷತೆಯನ್ನು ತಿಳಿಸಿದರು.
ಸುಮಾರು 50 ಮಕ್ಕಳು ಸ್ವಯಂಪ್ರೇರಿತರಾಗಿ ಮಕ್ಕಳು 60 ಸೂರ್ಯ ನಮಸ್ಕಾರ ಮಾಡಿ ಆಯೋಜಕರನ್ನು ಅಚ್ಚರಿಗೊಳಗಾಗಿಸಿದರು.
ರಮಾ ಲಕ್ಷ್ಮಿನಾರಾಯಣ ಶಾಖೆಯ ಶಿಕ್ಷಕ ಪ್ರೇಮನಾಥ ಸುವರ್ಣ, ವಸಂತ ಶೆಟ್ಟಿ ಮಾರಿಗುಡಿ ಶಾಖೆಯ ಶಿಕ್ಷಕಿ ಹರಿಣಿ ಮತ್ತು ಮೂರೂ ಶಾಖೆಗಳ ಬಂಧುಗಳು ಭಾಗವಹಿಸಿದ್ದರು.
ಶಿಕ್ಷಕಿ ವೀಣಾ ಪ್ರಾರ್ಥನೆ ಮಾಡಿದರು. ಶಿಕ್ಷಕಿ ಸಾವಿತ್ರಿ ವಂದನಾರ್ಪಣೆಗೈದರು. ಶಿಕ್ಷಕಿ ತೇಜಶ್ರೀ ನಿರೂಪಣೆ ಮಾಡಿದರು. ಮುಖ್ಯೋಪಾಧ್ಯಾಯಿನಿ ಶಾಲಿನಿ ಅವರು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು