3:20 PM Thursday27 - November 2025
ಬ್ರೇಕಿಂಗ್ ನ್ಯೂಸ್
ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆ: ನಕಲಿ ಟ್ರಸ್ಟ್ ಕಾರ್ಯಾಚರಣೆ; ಪೊಲೀಸರಿಗೆ ದೂರು

20/02/2024, 22:29

ಕೊಲ್ಲೂರು(reporterkarnataka.com): ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆಯೊಂದು ಬೆಳಕಿಗೆ ಬಂದಿದೆ. ಕೊಲ್ಲೂರು ಮೂಕಾಂಬಿಕೆ ದೇಗುಲದ ಹೆಸರಿನಲ್ಲಿ ನಕಲಿ ಟ್ರಸ್ಟ್‌ ರಚಿಸಿ ಹಣ ಸಂಗ್ರಹಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೇರಳ ಮತ್ತು ತಮಿಳುನಾಡಿನ ಮೂಕಾಂಬಿಕೆ ಭಕ್ತರನ್ನು ಟಾರ್ಗೆಟ್ ಮಾಡಿ ಈ ನಕಲಿ ಟ್ರಸ್ಟ್ ನ ಲಿಂಕ್ ಹರಿಯಬಿಡಲಾಗಿದೆ.
ದೇಗುಲಕ್ಕೆ ದೇಣಿಗೆ, ಹರಕೆ ಸಲ್ಲಿಸುವ ಭಕ್ತರು ಇದರಲ್ಲಿ ದುಡ್ಡು ಕಳುಹಿಸಬಹುದು ಎಂದು ನಮೂದಿಸಲಾಗಿದೆ. ಭಕ್ತರೊಬ್ಬರು ಹಣ ಕಳಿಸಿರುವ ಬಗ್ಗೆ ದೇಗುಲಕ್ಕೆ ಇ-ಮೇಲ್ ಮಾಡಿದಾಗ ಈ ಅಕೌಂಟ್‍ಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ಬಂದಿದೆ. ಈ ಟ್ರಸ್ಟ್ ವಿರುದ್ಧ ಈಗ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಕೇರಳದಲ್ಲಿ ಈ ಟ್ರಸ್ಟ್ ನೋಂದಣಿಯಾಗಿದೆ ಎನ್ನಲಾಗಿದೆ. ದೇಗುಲದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲಾಗುತ್ತಿದೆ. 2022ರಿಂದ ಈ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಗೆ ಮೋಸ ಮಾಡುಲಾಗುತ್ತಿದೆ ತಿಳಿದು ಬಂದಿದೆ. ಭಾರೀ ಮೊತ್ತದ ದುಡ್ಡು ಈ ಟ್ರಸ್ಟ್ ಲಪಟಾಯಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಮುಜರಾಯಿ ಇಲಾಖೆ ಸೂಕ್ತ ತನಿಖೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು