3:17 AM Thursday2 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದ 4 ಸಾರಿಗೆ ನಿಗಮಗಳಲ್ಲಿ ಶೇ.15ರಷ್ಟು ದರ ಹೆಚ್ಚಳ: ಸಚಿವ ಸಂಪುಟ ಅನುಮೋದನೆ ಮಂಗಳೂರು ಸಹಿತ ರಾಜ್ಯದ 6 ಸ್ಮಾರ್ಟ್‌ ಸಿಟಿ ಕಾಮಗಾರಿಗಳ ತನಿಖೆ: ಸಚಿವ ಬೈರತಿ… ಕ್ರೆಡಲ್ ನಿಂದ 40.53 ಕೋಟಿ ಲಾಭಾಂಶ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಸ್ತಾಂತರ ಬೆಂಗಳೂರು: ಬೈಕ್ ಶೋ ರೂಂನಲ್ಲಿ ಅಗ್ನಿ ಅನಾಹುತ: ಸುಟ್ಟು ಕರಕಲಾದ 60ಕ್ಕೂ ಹೆಚ್ಚು… ಮುಂದಿನ ವರ್ಷ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆ… ಎಚ್.ಡಿ.ಕೋಟೆ ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ: ಪರಿಶೀಲನೆ ಸೋಲಾರ್ ಅಳವಡಿಸಿದರೆ ಕೇಂದ್ರದಿಂದ ಸಬ್ಸಿಡಿ: ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್… ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇ. 18ರಷ್ಟು ಜಿಎಸ್ ಟಿ ರದ್ದತಿ ಕೋರಿ ಶೀಘ್ರವೇ… ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ; ಡ್ರೋನ್ ಬಳಕೆ: ಸಚಿವ ಈಶ್ವರ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಬಿಜೆಪಿಯಲ್ಲಿ ಟಿಕೆಟ್ ಗಾಗಿ ಜಂಗೀಕುಸ್ತಿ: ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಸಿ.ಟಿ. ರವಿ ಬೆಂಬಲಿಗರ ಆಗ್ರಹ?

22/02/2024, 14:09

ಚಿಕ್ಕಮಗಳೂರು(reporterkarnataka.com): ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಆಂತರಿಕ ಯುದ್ಧ ಆರಂಭವಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಬೆಂಬಲಿಗರ ನಡುವೆ ಈ ಕದನ ಆರಂಭವಾಗಿದೆ ಎನ್ನಲಾಗಿದೆ. ಹಾಲಿ ಸಂಸದೆ ಕರಂದ್ಲಾಜೆ ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬಾರದು ಎಂಬ ಕೂಗು ಕೇಳಲಾರಂಭಿಸಿದೆ.
ಶೋಭಾ ಕರಂದ್ಲಾಜೆ ಅವರಿಗೆ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರು ಪತ್ರ ಅಭಿಯಾನ ಆರಂಭಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರಿಗೆ ಅಂಚೆಯ ಮೂಲಕ ಪತ್ರ ಕಳುಹಿಸಲು ಆರಂಭಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸುಮಾರು 5 ಸಾವಿರಕ್ಕೂ ಅಧಿಕ ಪತ್ರಗಳನ್ನು ಕಾರ್ಯಕರ್ತರು ಬರೆದು ಅಂಚೆ ಮೂಲಕ ಕಳುಹಿಸಿದ್ದಾರೆ ಎಂದು ತಿಳಿದು. ಇದೇ ವೇಳೆ ಉತ್ತಮ ಅಭ್ಯರ್ಥಿ ಅಥವಾ ಹೊಸ ಮುಖಕ್ಕೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಪಟ್ಟುಹಿಡಿದಿದ್ದಾರೆ.
ಉಡುಪಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿ ನಡೆದ ಸಭೆಯಲ್ಲಿ ಶೋಭಾ ಕರಂದ್ಲಾಜೆ ಅವರನ್ನು ಮೀನುಗಾರ ಮುಖಂಡರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಶೋಭಾ ಕರಂದ್ಲಾಜೆ ಅವರು ಉಡುಪಿ- ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಎರಡು ಬಾರಿ ಸಂಸದೆಯಾದರೂ ಕ್ಷೇತ್ರ ಅಭಿವೃದ್ಧಿ ಮಾಡಿಲ್ಲ ಅವರಿಗೆ ಈ ಬಾರಿ ಟಿಕೆಟ್ ಬೇಡ ಎಂದು ಬಿಜೆಪಿಯ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಅವರು ಆಗಮಿಸಿಲ್ಲ ಎಂಬುವುದು ಕಾರ್ಯಕರ್ತರ ಆರೋಪವಾಗಿದೆ. ಕಳೆದ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಸೋಲು ಅನುಭವಿಸಿತ್ತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿ.ಟಿ. ರವಿ ಅವರು ಕೂಡ ಹೀನಾಯ ಸೋಲು ಕಂಡಿದ್ದರು. ಬಿಜೆಪಿಯ ಭದ್ರಕೋಟೆ ಕೈ ವಶವಾಗಿತ್ತು. ಇದರಿಂದ ಸಿ.ಟಿ. ರವಿ ಅವರ ಬೆಂಬಲಿಗರು ತೀವ್ರ ಅಸಮಾಧಾನಗೊಂಡಿದ್ದರು.
ಇವೆಲ್ಲದರ ನಡುವೆ ಚಿಕ್ಕಮಗಳೂರು ಉಡುಪಿ ಲೋಕಸಭಾ ಟಿಕೆಟ್‌ಗಾಗಿ ಸಿ.ಟಿ ರವಿ ಪ್ರಯತ್ನಿಸುತ್ತಿದ್ದಾರೆ ಎಂಬ ಸುದ್ದಿ ಇದೆ. ಈ ಕಾರಣದಿಂದಲೇ ರವಿ ಹಾಗೂ ಶೋಭಾ ಬೆಂಬಲಿಗರ ನಡುವೆ ಬಣ ರಾಜಕೀಯ ಶುರುವಾಗಿದೆ ಎನ್ನಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಚಿಕ್ಕಮಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ, ಬಿಜೆಪಿ ಕಾಯಕರ್ತರು ಸಿ. ಟಿ. ರವಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೂಡ ಮಾಡಿದ್ದರು. ಇದೀಗ ಶೋಭಾ ವಿರುದ್ಧ ಉಡುಪಿಯಲ್ಲಿ ವ್ಯಕ್ತವಾದ ಅಸಮಾಧಾನ ಸಿ.ಟಿ. ರವಿ ಬೆಂಬಲಿಗರಿಗೆ ವರವಾಗಿ ಪರಿಣಮಿಸಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು