1:46 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ವಿಧಾನ ಸಭೆ ಕಲಾಪ ವೀಕ್ಷಣೆ: ಬೆಂಡೋಡಿ ಸರಕಾರಿ ಶಾಲಾ ಪುಟಾಣಿಗಳು ಫುಲ್ ಖುಷ್; ವ್ಯವಸ್ಥೆ ಮಾಡಿಕೊಟ್ಟ ಸ್ಪೀಕರ್ ಖಾದರ್

22/02/2024, 17:36

ಸುಳ್ಯ(reporterkarnataka.com): ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಸರಕಾರಿ ಕಿರಿಯ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಜೊತೆಗೆ ಬೆಂಗಳೂರಿನ ವಿಧಾನ ಸೌಧಕ್ಕೆ ಆಗಮಿಸಿ ವಿಧಾನ ಸಭಾ ಕಲಾಪ ವೀಕ್ಷಿಸಿದರು.
ಬೆಂಡೋಡಿ ಶಾಲಾ ಮುಖ್ಯ ಶಿಕ್ಷಕಿ ಲಲಿತಾ ಕುಮಾರಿ ನೇತೃತ್ವದಲ್ಲಿ ಶಾಲೆಯ 14 ಮಂದಿ ಪುಟಾಣಿಗಳು ವಿಧಾನ ಸಭಾ ಕಲಾಪ ವೀಕ್ಷಿಸಿದರು. ಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ಶಾಲಾ ಬೇಡಿಕೆಗಳ ಬಗ್ಗೆ ಮಕ್ಕಳು ಮನವಿ ಸಲ್ಲಿಸಿದರು. ಬಳಿಕ ಯು.ಟಿ.ಖಾದರ್ ಅವರ ಜೊತೆಗೆ ವಿಧಾನ ಸೌಧದ ಮುಂಭಾಗ ಪೊಟೊ ತೆಗೆಸಿಕೊಂಡರು. ಪ್ರಥಮ ಬಾರಿಗೆ ವಿಧಾನ ಸಭಾ ಕಲಾಪ ವೀಕ್ಷಿಸಿದ ಮಕ್ಕಳು ಸಂತಸ ವ್ಯಕ್ತಪಡಿಸಿದರು.
ಇತ್ತೀಚೆಗೆ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಕೊಲ್ಲಮೊಗ್ರು ವಿಗೆ ಆಗಮಿಸಿದ್ದ ಯು.ಟಿ.ಖಾದರ್ ಅವರು ಗ್ರಾಮದ ಸರಕಾರಿ ಶಾಲೆಯೊಂದರ ಮಕ್ಕಳಿಗೆ ವಿಧಾನ ಸಭಾ ಕಲಾಪ ವೀಕ್ಷಣೆಗೆ ವ್ಯವಸ್ಥೆ ಮಾಡುವ ಭರವಸೆ ನೀಡಿದಂತೆ ಕಲಾಪ ವಿಕ್ಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು