8:34 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ನಂಜನಗೂಡು: ಗ್ರಾಮಸ್ಥರು ತಿರುಗಾಡುವ ರಸ್ತೆಗೆ ಅಡ್ಡಿಪಡಿಸಿ ಮುಳ್ಳು ಚಾಚಿದ ಕಿಡಿಗೇಡಿಗಳು; ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳಿಗೂ ಧಮ್ಕಿ

23/02/2024, 20:44

*ಗ್ರಾಮದಲ್ಲಿ ಅಶಾಂತಿ ಮೂಡಿಸಲು ಬಂದ ಹೊರಗಿನವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಗರಸಭಾ ಮಾಜಿ ಅಧ್ಯಕ್ಷ ಶಂಕರ್ ಆಗ್ರಹ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹಲವಾರು ವರ್ಷಗಳಿಂದಲೂ ಗ್ರಾಮದ ಸಾರ್ವಜನಿಕರು ಸಂಚರಿಸುತ್ತಿದ್ದ ಸರ್ಕಾರಿ ರಸ್ತೆಗೆ ಏಕಾಏಕಿ ಮುಳ್ಳು ಚಾಚಿ ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದರಲ್ಲದೆ ರಸ್ತೆಗೆ ಡಕ್ ನಿರ್ಮಾಣ ಮಾಡಲು ಬಂದಿದ್ದ ನಗರಸಭೆ ಅಧಿಕಾರಿಗಳಿಗೂ ಮತ್ತು ಗ್ರಾಮಸ್ಥರಿಗೂ ಆವಾಜ್ ಹಾಕಿ ಕಾಮಗಾರಿಗೆ ತಡೆಹೊಡ್ಡಿದ ಘಟನೆ ನಂಜನಗೂಡು ಪಟ್ಟಣದ ಚಾಮಲಾಪುರದ ಹುಂಡಿ ಗ್ರಾಮದಲ್ಲಿ ನಡೆದಿದೆ.
ಪಟ್ಟಣದ ಚಾಮಲಾಪುರದ ಹುಂಡಿ ಗ್ರಾಮದ ಸರ್ವೆ ನಂಬರ್ 220 ಮತ್ತು 221ರಲ್ಲಿ ಸರ್ಕಾರಿ ಭೂಮಿಯಲ್ಲಿ ಬಂಡಿ ದಾರಿ ಇದೆ ಎಂದು ನಂಜನಗೂಡಿನ ರೆವಿನ್ಯೂ ಇಲಾಖೆ ಮತ್ತು ಸರ್ವೆ ಇಲಾಖೆಯಿಂದ ಅಳತೆ ಮಾಡಿಸಿ ದಾಖಲಾತಿ ಪತ್ರಗಳನ್ನು ನಂಜನಗೂಡಿನ ನಗರಸಭಾ ಅಧಿಕಾರಿಗಳಿಗೆ ನೀಡಲಾಗಿದೆ.
ಪೂರ್ಣ ಪ್ರಮಾಣದ ದಾಖಲಾತಿ ಜತೆಗೆ ಸಾಕಷ್ಟು ವರ್ಷಗಳಿಂದ ಸಾರ್ವಜನಿಕರು ತಿರುಗಾಡುವ ರಸ್ತೆಯ ಜಾಗ ನಮ್ಮದು ಎಂದು ಕೆಲವು ಹೊರಗಿನ ಮಧ್ಯವರ್ತಿಗಳು ಗ್ರಾಮಸ್ಥರಿಗೆ ಸಮಸ್ಯೆ ತಂದೊಡ್ಡಿದ್ದಾರೆ.
ಚಾಮಲಾಪುರದ ಹುಂಡಿ ಗ್ರಾಮದ ನಗರಸಭಾ ಮಾಜಿ ಅಧ್ಯಕ್ಷ ಶಂಕರ್ ಮತ್ತು ಗ್ರಾಮಸ್ಥರು ಇದಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ರವರಿಗೆ ದೂರು ನೀಡಿದ ಪರಿಣಾಮ ತಹಶೀಲ್ದಾರ್ ಕಚೇರಿಯಿಂದ ಸ್ಪಷ್ಟ ದಾಖಲಾತಿ ಮತ್ತು ನಕ್ಷೆ ಪತ್ರಗಳನ್ನು ನೀಡಿದ್ದಾರೆ. ಆದರೂ ಕೆಲವು ಮದ್ಯವರ್ತಿಗಳು ಅವರ ಬಳಿ ಯಾವುದೇ ದಾಖಲಾತಿ ಇಲ್ಲದಿದ್ದರೂ ಇದಕ್ಕೆ ಒಪ್ಪದೇ ಇದು ರಸ್ತೆಯಲ್ಲ ನಮ್ಮ ಜಮೀನು ಎಂದು ಖ್ಯಾತೆ ತೆಗೆದು ಸಾರ್ವಜನಿಕರು ತಿರುಗಾಡುವ ರಸ್ತೆಗೆ ಅಡ್ಡಿ ಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನಗರಸಭಾ ಅಧಿಕಾರಿಗಳು ಹಾಗೂ ಗ್ರಾಮಸ್ಥರಿಗೆ ಹೊರಗಿನ ಕೆಲವು ಮಧ್ಯವರ್ತಿಗಳು ಹಾಗೂ ಅವರ ಸಂಬಂಧಿಕರು ಗಲಾಟೆಗೆ ಮುಂದಾಗಿ ತಿರುವಾಡುವ ರಸ್ತೆಗೆ ಮುಳ್ಳು ಚಾಚಿ ಮಾತಿನ ಚಕಮಕಿನಡೆಸಿ ಗಲಾಟೆಗೆ ಮುಂದಾಗಿದ್ದಾರೆ.


ಇದರಿಂದಾಗಿ ಘಟನೆಯ ಸೂಕ್ಷ್ಮತೆಯನ್ನರಿತ ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿ ಗಲಾಟೆಯನ್ನು ತಿಳಿಗೊಳಿಸಿದರು. ಯಾವುದೇ ದಾಖಲೆ ನೀಡದೆ ಕಾಮಗಾರಿಗೆ ಅಡ್ಡಿಪಡಿಸಿದವರ ವಿರುದ್ಧ ದೂರು ದಾಖಲಿಸುವುದಾಗಿ ತಿಳಿಸಿ ನಗರಸಭಾ ಅಧಿಕಾರಿಗಳು ಸ್ಥಳದಿಂದ ಕಾಲ್ಕಿತ್ತರು. ಗ್ರಾಮಸ್ಥರು ಮತ್ತು ನಗರಸಭಾ ಮಾಜಿ ಅಧ್ಯಕ್ಷ ಶಂಕರ್ ಸಂಬಂಧಪಟ್ಟ ನಗರಸಭಾ ಇಲಾಖೆಗಳು ಕೂಡಲೇ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗ ಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು